-ಹಿರಿಯ ನಾಗರಿಕರ ದಿನಾಚರಣೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ
ನಗರದ ಪೊಲೀಸ್ ಠಾಣೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು. ತಾಲೂಕು ಕಾನೂನು ಸೇವೆಗಳ ಸಮಿತಿ, ಶಹಾಪುರ, ತಾಲೂಕ ವಕೀಲರ ಸಂಘ, ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸಸಿಗೆ ನೀರು ಎರೆದು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರು ಕೆಲಸದ ನಿಮಿತ್ತ ಯಾವುದೇ ಕಚೇರಿಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅವರನ್ನು ಗೌರವದಿಂದ ಕಾಣುವುದರೊಂದಿಗೆ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ಯಾನಲ್ ವಕೀಲೆ ಸತ್ಯಮ್ಮ ಅವರು, ಇತ್ತೀಚೆಗೆ ಬದಲಾದ ದಿನಮಾನಗಳಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿದ್ದು, ವಿಭಕ್ತ ಕುಟುಂಬಗಳೇ ಜಾಸ್ತಿ ಆಗುತ್ತಿವೆ. ಪತಿ- ಪತ್ನಿ, ಮಕ್ಕಳು ಮಾತ್ರ ಕುಟುಂಬ ಎಂದು ಭಾವಿಸುವ ಈಗಿನ ಯುವಪೀಳಿಗೆಯ ಮನಸ್ಥಿತಿಯಿಂದಾಗಿ ಆ ಮನೆಯಲ್ಲಿರಬೇಕಾದ ಹಿರಿಯರಿಗೆ ಜಾಗ ಇಲ್ಲದಂತಾಗುತ್ತಿದೆ. ಇದ್ದರೂ ಆ ಹಿರಿ ಜೀವಿಗಳಿಗೆ ಸಿಗಬೇಕಾದ ಗೌರವ, ಸ್ಥಾನಮಾನಕ್ಕೆ ಧಕ್ಕೆ ಉಂಟಾಗುತ್ತಿರುವ ಪರಿಣಾಮ ಅವರು ಖಿನ್ನತೆಗೆ ಒಳಾಗುತ್ತಿದ್ದಾರೆ ಎಂದರು.ಹಿರಿಯರನ್ನು ಕಡೆಗಣಿಸಿದರೆ ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ನಮ್ಮನ್ನು ಕಡೆಗಣಿಸುವುದರಲ್ಲಿ ತಪ್ಪೇನಿಲ್ಲ. ನಾವು ಹಿರಿಯರನ್ನು ಗೌರವದಿಂದ ನೋಡಿಕೊಂಡರೆ ನಮ್ಮ ಮಕ್ಕಳು ನಮ್ಮನ್ನು ಗೌರವರಿಂದ ಕಾಣುತ್ತಾರೆ. ಪ್ರತಿಯೊಬ್ಬರು ಹಿರಿಯರನ್ನು ಗೌರವದಿಂದ ಕಾಣುವಂತಹ ಸಮಾಜ ನಿರ್ಮಾಣ ಮಾಡೋಣ ಎಂದರು.
------
26ವೈಡಿಆರ್5 : ಶಹಾಪುರ ಪೊಲೀಸ್ ಠಾಣೆ ಸಭಾಂಗಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ಶಹಾಪುರ, ತಾಲೂಕ ವಕೀಲರ ಸಂಘ, ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಿತು.