ಮಂಗಳೂರು: ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ನೆರವೇರಿತು.ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಜಿಲ್ಲಾ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಮುಖಂಡ ವಿಶ್ವನಾಥ್ ಶೆಟ್ಟಿ ಅವರು ಕಾರ್ಯಕರ್ತರು ಸಂಘಟನೆಯ ಶಿಸ್ತು ಮತ್ತು ನಿಯಮಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವ ಅಗತ್ಯದ ಬಗ್ಗೆ ತಿಳಿಸಿದರು. ಕಾವೀರ್ಕ ಇಲಾಖೆಯೊಂದಿಗೆ ಉತ್ತಮ ಸಹಕಾರದ ವಾತಾವರಣವನ್ನು ನಿವೀರ್ಸುವ ಮಹತ್ವವನ್ನು ವಿವರಿಸಿದರು.ಬಿ.ಎಂ.ಎಸ್. ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು. ಡಿ.7ರಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆಯಲಿರುವ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ರಾಜ್ಯ ಅಧಿವೇಶನ ಕುರಿತು ಪ್ರಮುಖ ಮಾರ್ಗಸೂಚಿಗಳನ್ನು ನೀಡಿದರು. ಈ ಅಧಿವೇಶನದಲ್ಲಿ ಪ್ರತಿ ತಾಲೂಕಿನಿಂದ ಆಯ್ದ ಪದಾಧಿಕಾರಿಗಳು ಹಾಗೂ ಪ್ರಮುಖರು ಭಾಗವಹಿಸುವಂತೆ ಸೂಚಿಸಿ, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿದರು.
ಈ ಅಧಿವೇಶನದ ಸಿದ್ಧತೆಯ ಪ್ರಮುಖ ಜವಾಬ್ದಾರಿಯನ್ನು ಕುಮಾರ್ ನಾಥ್ ಉಜಿರೆ ಅವರಿಗೆ ವಹಿಸಲಾಯಿತು.ಜಿಲ್ಲೆಯ ಎಲ್ಲ ತಾಲೂಕುಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಮುಂದಿನ ರಾಜ್ಯ ಅಧಿವೇಶನದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಿತು.