ಕನ್ನಡಪ್ರಭ ವಾರ್ತೆ ಎಚ್.ಎನ್.ನಾಗರಾಜು ಕೊರಟಗೆರೆ
ರಸ್ತೆಯಲ್ಲಿ ಸಿಸಿ ರಸ್ತೆಯ ಮಧ್ಯೆದಲ್ಲಿ ಕಾಲುವೆ ಮಾಡಿ ನೀರು ಹೋಗಲು ಮಾಡಿದ್ದಾರೆ. ಆ ಕಾಲುವೆಗೆ ಈಗಾಗಲೇ ಅನೇಕರು ಬಿದ್ದು ಕೈಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿರುವ ಪ್ರಕರಣಗಳು ಕಾಣಬಹುದಾಗಿದೆ. ವಾಹನ ಸವಾರರ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕಲಷಿತ ನೀರು ರಸ್ತೆಯ ಮೇಲೆ ಹರಿದು ಕಸ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಗೊಂಡು ಗಬ್ಬೆದ್ದು ನಾರುತ್ತಿದೆ.ಕೊಳಚೆ ಪ್ರದೇಶದಿಂದ ಎಲ್ಲಾ ಕಡೆ ಸೊಳ್ಳೆಗಳ ಕಾಟ ವಿಪರೀತವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸೌಜನ್ಯಕ್ಕಾದರೂ ಸೊಳ್ಳೆ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಒಳಚರಂಡಿ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಹಲವು ಬಾರಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.ಸರ್ಕಾರಿ ಪ್ರೌಢಶಾಲೆ ಮುಂದೆ ಖಾಲಿ ಇರುವ ಪೆಟ್ಟಿಗೆ ಅಂಗಡಿಯನ್ನ ತೆರವು ಮಾಡಿಸಿದರೆ ಚರಂಡಿಯಲ್ಲಿ ನೀರು ಸರಾಗವಾಗಿ ಹೋಗುತ್ತದೆ. ಆದರೆ ಅಧಿಕಾರಿಗಳು ಪೆಟ್ಟಿಗೆ ಅಂಗಡಿ ತೆರವು ಮಾಡಿಸಲು ಮೀನಾಮೇಷ ಏಣಿಸುತ್ತಿದ್ದಾರೆ. ಕೂಡಲೇ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸಿ, ರಸ್ತೆ ದುರಸ್ತಿ ಮಾಡಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಿಸಬೇಕು. ತುರ್ತಾಗಿ ಚರಂಡಿ ನಿರ್ಮಿಸಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೋಟ್;ಸುಮಾರು ೪೦ಕ್ಕೂ ಹೆಚ್ಚು ಮನೆಗಳು ಇರುವ ಕಾವಲಮ್ಮನಗರದಲ್ಲಿ ಚರಂಡಿ ಇಲ್ಲದೇ ಮನೆಯ ಬಚ್ಚಲ ಮನೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಇದರಿಂದ ಗ್ರಾಮದಲ್ಲಿರುವ ಅಂಗನವಾಡಿ ಮಕ್ಕಳು ಹಾಗೂ ವೃದ್ದರಿಗೆ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ. ಚರಂಡಿ ವಾಸನೆಯಿಂದ ಮೂಗು ಮುಚ್ಚಿಕೊಂಡು ಓಡಾಡುವಂತೆ ಆಗಿದೆ. ಜಯಲಕ್ಷ್ಮೀ ಸ್ಥಳೀಯರು.