ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಭಾನುವಾರ ಬೆಳಗ್ಗೆ ದೊಡ್ಡಳ್ಳಿ ಗ್ರಾಮದ ರೈತ ಕುಂಬುಗೌಡನ ಸದಾ ಎಂಬುವರು ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದರು. ಗದ್ದೆ ಏರಿಯಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬದಿಂದ ವಿದ್ಯತ್ ಲೀಕೇಜ್‍ಗೊಂಡು ಗದ್ದೆಯೊಳಗೆ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವನ್ನಪ್ಪಿದೆ. ಉಳುಮೆ ಮಾಡುತ್ತಿದ್ದ ಸದಾ ಅವರಿಗೆ ವಿದ್ಯುತ್ ಶಾಕ್ ಹೊಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೊಂದು ಎತ್ತು ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಸದಾ ಅವರ ಪತ್ನಿ ವೀಣಾ ಗದ್ದೆಯ ಮತ್ತೊಂದು ಬದಿಯಲ್ಲಿ ಕೆಲಸ ಮಾಡುತ್ತಿದ್ದರು, ರೈತ ಸದಾ ಅವರಿಗೆ ಸ್ವಲ್ಪ ಮಟ್ಟಿಗೆ ವಿದ್ಯುತ್ ಶಾಕ್ ತಗುಲಿದ್ದರಿಂದ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆ ವ್ಯಾಪ್ತಿಯಲ್ಲಿ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.