ಸುರತ್ಕಲ್ ಬಂಟರ ಸಂಘದಲ್ಲಿ ಆಟಿದ ಪೊರ್ಲು , ಸಾಧಕರಿಗೆ ಅಭಿನಂದನೆ

KannadaprabhaNewsNetwork |  
Published : Aug 14, 2026, 02:15 AM IST
ಸುರತ್ಕಲ್ ಬಂಟರ ಸಂಘದಲ್ಲಿ ಆಟಿದ ಪೊರ್ಲು ಕಾರ್ಯಕ್ರಮ, ಸಾಧಕರಿಗೆ ಅಭಿನಂದನೆ | Kannada Prabha

ಸಾರಾಂಶ

ಹಿರಿಯರು ನಮ್ಮ ಸಮಾಜದ ಆಸ್ತಿಯಾಗಿದ್ದು, ಅವರನ್ನು ಮುಂದಿಟ್ಟುಕೊಂಡು ಕಿರಿಯರ ಒಗ್ಗೂಡುವಿಕೆಯಿಂದ ಜರುಗುವ ಕಾರ್ಯಕ್ರಮ ಭವಿಷ್ಯದ ದಿಕ್ಸೂಚಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಮೂಲ್ಕಿ: ಹಿರಿಯರು ನಮ್ಮ ಸಮಾಜದ ಆಸ್ತಿಯಾಗಿದ್ದು, ಅವರನ್ನು ಮುಂದಿಟ್ಟುಕೊಂಡು ಕಿರಿಯರ ಒಗ್ಗೂಡುವಿಕೆಯಿಂದ ಜರುಗುವ ಕಾರ್ಯಕ್ರಮ ಭವಿಷ್ಯದ ದಿಕ್ಸೂಚಿ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.ಸುರತ್ಕಲ್ ಬಂಟರ ಸಂಘ ಮತ್ತು ಸಂಘದ ಮಹಿಳಾ ವೇದಿಕೆಯ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಜರುಗಿದ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮವನ್ನು ಆಟಿ ತಿಂಗಳಲ್ಲಿ ಮನೆ ಮನೆಗೆ ತಿರುಗಾಟ ನಡೆಸುವ ಚಿಕ್ಕ ಮೇಳ ಗುತ್ತಿನ ಮನೆಯ ಚಾವಡಿಗೆ ಆಗಮಿಸುವ ಮೂಲಕ ಉದ್ಘಾಟಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಮಾತನಾಡಿ, ಸಮಾಜದ ಎಲ್ಲರೂ ಜೊತೆಯಾಗಿ ಸಮಾಜಕ್ಕೆ ಉಪಯುಕ್ತವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸುರತ್ಕಲ್ ಬಂಟರ ಸಂಘದ ಹೊಸ ಕಟ್ಟಡ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಪಾದುವಾ ಕಾಲೇಜಿನ ಪ್ರೊಫೆಸರ್ ಅಕ್ಷಯ ಆರ್. ಶೆಟ್ಟಿ ದಿಕ್ಸೂಚಿ ಭಾಷಣ ಮಾಡಿದರು. ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಸಾಧಕರಾದ ಕೃಷಿ ಕ್ಷೇತ್ರದ ವಾಮನ ಶೆಟ್ಟಿ ಸೂರಿಂಜೆ, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದ ಗೀತಾ ಸುರತ್ಕಲ್, ಭರತ ನಾಟ್ಯ ಕ್ಷೇತ್ರದ ಚಂದ್ರಶೇಖರ ನಾವಡ ಚೇಳಾಯರು, ಲಲಿತಕಲೆ ಕ್ಷೇತ್ರದ ಧನಪಾಲ್ ಶೆಟ್ಟಿಗಾರ್ ತಡಂಬೈಲ್ ಮತ್ತು ಗುಡಿ ಕೈಗಾರಿಕೆಯ ವಾರಿಜ ಡಿ. ಬಂಗೇರ ಕುಳಾಯಿ ಅವರನ್ನು ಸನ್ಮಾನಿಸಲಾಯಿತು.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಂಡ ಎನ್ನೆಸ್ಸೆಸ್‌ ಅತ್ಯುತ್ತಮ ಸ್ವಯಂ ಸೇವಕಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತೆ ಯುಕ್ತಿ ಶೆಟ್ಟಿ ಅವರನ್ನು ಗೌರವಿಸಲಾಯಿತು. ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ ಶೆಟ್ಟಿ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಕಟೀಲು ತುಳು ವರ್ಲ್ಡ್ ಫೌಂಡೇಶನ್ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಬಂಟರ ಸಂಘ ಸುರತ್ಕಲ್ ಮಾಜಿ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜ ಟಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ, ಉಪಾಧ್ಯಕ್ಷ ಪ್ರವೀಣ್ ಪಿ. ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಮಹಿಳಾ ಘಟಕದ ಕಾರ್ಯದರ್ಶಿ ರಾಜೇಶ್ವರಿ ಡಿ. ಶೆಟ್ಟಿ, ಕೋಶಾಧಿಕಾರಿ ಮಾಲತಿ ಜೆ. ಶೆಟ್ಟಿ, ಉಪಾಧ್ಯೆಕ್ಷೆ ಜಯಂತಿ ಪಿ.ಟಿ. ರೈ ಮತ್ತಿತರರಿದ್ದರು.

ಡಾ. ಸುಧಾ ಚಂದ್ರಶೇಖರ ಶೆಟ್ಟಿ ಮತ್ತು ಸೌಮ್ಯ ಭಂಡಾರಿ ಹೊಸಬೆಟ್ಟು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿ.ನಾಗೇಂದ್ರ ರಾಜೀನಾಮೆಗೆ ನೀಡಲಿ
ನಡುಗಡ್ಡೆ ಪ್ರದೇಶದ ಸಂತ್ರಸ್ತರಿಗೆ ತಕ್ಷಣವೇ ನಿವೇಶನ ಕೊಡಿ