14ರಿಂದ ಬಂಟ್ಸ್‌ಹಾಸ್ಟೆಲ್‌ 20ನೇ ವರ್ಷದ ಗಣೇಶೋತ್ಸವ

KannadaprabhaNewsNetwork |  
Published : Sep 09, 2026, 02:45 AM IST
ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮೇನೇಜಿಂಗ್‌ ಟ್ರಸ್ಟಿ ಅಜಿತ್‌ ಕುಮಾರ್‌ ರೈ ಮಾಲಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೇಲ್‌ ವತಿಯಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆ ಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಸೆ.14ರಿಂದ 16ರವರೆಗೆ ನಡೆಯಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮೇನೇಜಿಂಗ್‌ ಟ್ರಸ್ಟಿ ಅಜಿತ್‌ ಕುಮಾರ್‌ ರೈ ಮಾಲಾಡಿ ತಿಳಿಸಿದರು.

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳು, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೇಲ್‌ ವತಿಯಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ, ತೆನೆ ಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಸೆ.14ರಿಂದ 16ರವರೆಗೆ ನಡೆಯಲಿದೆ ಎಂದು ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮೇನೇಜಿಂಗ್‌ ಟ್ರಸ್ಟಿ ಅಜಿತ್‌ ಕುಮಾರ್‌ ರೈ ಮಾಲಾಡಿ ತಿಳಿಸಿದರು.

ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಗಣೇಶೋತ್ಸವಕ್ಕೆ ಸಿದ್ಧತೆಗಳು ಸರ್ವರ ಸಹಕಾರದಲ್ಲಿ ನಡೆಯುತ್ತಿದೆ ಎಂದರು.

ಪ್ರತಿಷ್ಠಾನದ ಟ್ರಸ್ಟಿ ಡಾ.ಆಶಾಜ್ಯೋತಿ ರೈ ಬಂಬ್ರಾಣ ಮಾತನಾಡಿ, ಸೆ.13ರಂದು ಸಂಜೆ ರಾಧಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಗಣೇಶ ವಿಗ್ರಹವನ್ನು ಬಂಟ್ಸ್‌ಹಾಸ್ಟೇಲ್‌ನ ‘ಓಂಕಾರ ನಗರ’ಕ್ಕೆ ಬರಮಾಡಿಕೊಳ್ಳಲಾಗುವುದು. ಸೆ.14ರಂದು ಬೆಳಗ್ಗೆ 8ಕ್ಕೆ ಮೂರ್ತಿ ಪ್ರತಿಷ್ಠೆ, 9ಕ್ಕೆ ಧ್ವಜಾರೋಹಣ, ಉದ್ಘಾಟನಾ ಕಾರ್ಯಕ್ರಮ ಮತ್ತು ತೆನೆ ವಿತರಣೆ, ಸಂಜೆ 3ರಿಂದ ಪಾಂಚಜನ್ಯ ಪ್ರತಿಷ್ಠಾನ ಕುಡ್ಲ ಕಲಾವಿದರಿಂದ ‘ಶ್ರೀ ಮಂಗಳಪುರದ ಮಂಗಳಾಂಬಿಕೆ’ ನೃತ್ಯನಾಟಕ, ಸಂಜೆ 5ರಿಂದ ಧಾರ್ಮಿಕ ಸಭೆ, ರಾತ್ರಿ 8ರಿಂದ ‘ಬಂಟಕಲಾ ಸಂಗಮ–2026’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸೆ.15ರಂದು ಬೆಳಗ್ಗೆ 11.30ರಿಂದ ಮೂಡಪ್ಪ ಸೇವೆ, ಮಹಾಪೂಜೆ, ಸಂಜೆ 4ರಿಂದ ಅಷ್ಟೋತ್ತರ ಸಹಸ್ರನಾರಿಕೇಳ ಮಹಾಗಣಯಾಗದ ಪೂರ್ವಭಾವಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಸಂಜೆ 5ರಿಂದ ಧಾರ್ಮಿಕ ಸಭೆ, 7.30ರಿಂದ ಹೂವಿನ ಪೂಜೆ, ರಂಗಪೂಜೆ, ಮಹಾಪೂಜೆ, ರಾತ್ರಿ 8ರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಸೆ.16ರಂದು ಬೆಳಗ್ಗೆ 8.30ರಿಂ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ, ಪೂರ್ಣಾಹುತಿ, ಮಹಾಪೂಜೆ ಹಾಗೂ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 3.30ಕ್ಕೆ ಶೋಭಾಯಾತ್ರೆ ಆರಂಭವಾಗಿ ವಿವಿಧ ಮಾರ್ಗಗಳ ಮೂಲಕ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಗ್ರಹ ವಿಸರ್ಜನೆಗೊಳ್ಳಲಿದೆ. ಮೂರು ದಿನಗಳಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಬಂಟರ ಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ.ಕರುಣಾಕರ ಶೆಟ್ಟಿ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ, ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ, ಪ್ರಮುಖರಾದ ರಾಮ್ ಮೋಹನ್ ರೈ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತ್ ಜೋಡೋದಿಂದ ಹೊಸ ಅವಕಾಶ ಸೃಷ್ಟಿ: ಸೊರಕೆ
ಭಾರತೀಯ ಅಧ್ಯಾತ್ಮ ನೈಜ ಜಾತ್ಯತೀತವಾದ: ಪೇಜಾವರ ಶ್ರೀ