ಮದ್ದೂರು: ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಬಳಿ ಶುಕ್ರವಾರ ಸಂಜೆ ಗಾರ್ಮೆಂಟ್ಸ್ ನೌಕರರನ್ನು ಕರದೊಯ್ಯುತ್ತಿದ್ದ ಬಸ್ ಲಾರಿಗೆ ಡಿಕ್ಕಿ ಹೊಡೆದು 25 ಮಂದಿ ಗಾಯಗೊಂಡಿರುವ ಘಟನೆ ಜರುಗಿದೆ.
ಉಳಿದವರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳೆಲ್ಲರೂ ಮದ್ದೂರು ತಾಲೂಕು ಸೋಮನಹಳ್ಳಿ ಗಿಲ್ ವುಡ್ ಗಾರ್ಮೆಂಟ್ಸ್ ಕಾರ್ಖಾನೆಯ ಕಾರ್ಮಿಕರಾಗಿದ್ದಾರೆ. ಕೆಲಸ ಮುಗಿದ ನಂತರ ತಮ್ಮ ತಮ್ಮ ಗ್ರಾಮಗಳಿಗೆ ತೆರಳಲು ತಿಮ್ಮ ದಾಸ್ ಟ್ರಾವೆಲ್ಸ್ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು.
ಶಿವಪುರ ಸತ್ಯಾಗ್ರಹ ಸೌಧದ ಬಳಿಯ ಬೆಂಗಳೂರು- ಮೈಸೂರು ಹಳೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲ ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.