ಕನ್ನಡಪ್ರಭ ವಾರ್ತೆ ಮಡಿಕೇರಿ
ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕದ ಇಳಿಜಾರಿಗೆ ವಾಲಿಕೊಂಡಿದೆ. ತನಗೆ ಹೃದಯಘಾತವಾಗುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಹೃದಯಾಘಾತ ತೀವ್ರವಾಗುತ್ತಿದ್ದಂತೆ ಚಾಲಕ ಚರಂಡಿಯ ಬಳಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಬಸ್ ಕೊಂಚ ವಾಲಿಕೊಂಡಿದೆ. ಆದರೆ ಪ್ರಯಾಣಿಕರ ಜೀವಕ್ಕೇನು ಅಪಾಯವಾಗಿಲ್ಲ. ತಕ್ಷಣವೇ ಚಾಲಕನನ್ನು ಮಡಿಕೇರಿ ಬಳಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಾಲಕ ಈ ಸಂದರ್ಭ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಬದಿಯಲ್ಲಿ ಬಸ್ ವಾಲಿಕೊಂಡು ನಿಂತ ಕಾರಣ ಹೆದ್ದಾರಿಯಲ್ಲಿ ಇತರ ವಾಹನ ಸಂಚಾರಕ್ಕೆ ಯಾವುದೇ ಅಡೆ ತಡೆ ಆಗಿಲ್ಲ. ಇತ್ತ ಘಟನೆಯಿಂದ ಆತಂಕಗೊಂಡ ಪ್ರಯಾಣಿಕರಿಗೆ ಬೇರೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ.