ಚಿಕ್ಕಮಗಳೂರುಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಹಾಲು, ಬಸ್ ಪ್ರಯಾಣ ದರದಿಂದ ಹಿಡಿದು ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಜನರ ಬದುಕು ದುಸ್ತರಗೊಳಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಆರೋಪಿಸಿದರು.
ಕೆಎಸ್ಆರ್ಟಿಸಿ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ನಗರದಬಸ್ ನಿಲ್ದಾಣದ ಪ್ರವೇಶದ್ವಾರದ ಬಳಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಪಂಚ ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಹಾಲು, ಬಸ್ ಪ್ರಯಾಣ ದರದಿಂದ ಹಿಡಿದು ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಜನರ ಬದುಕು ದುಸ್ತರಗೊಳಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ಶೆಟ್ಟಿ ಆರೋಪಿಸಿದರು.ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಬುಧವಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪ್ರವೇಶದ್ವಾರದ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ಪಂಚ ಗ್ಯಾರಂಟಿಗಳ ಭರವಸೆ ನೀಡಿ ಮತದಾರರನ್ನು ಸೆಳೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಜನರಿಗೆ ನೀಡಿದ ಭರವಸೆಗಳಿಗಿಂತ ಹೆಚ್ಚಿನ ಆರ್ಥಿಕ ಹೊರೆ ಹೇರುತ್ತಿದೆ ಎಂದು ಟೀಕಿಸಿದರು.ಸರ್ಕಾರ ಬಡವರ ಪರವಾಗಿದೆ ಎಂದು ಹೇಳಿಕೊಳ್ಳುತ್ತಿದೆಯೇ ಹೊರತು, ಅದರ ಆಡಳಿತದಲ್ಲಿ ಜನಸಾಮಾನ್ಯರಿಗೆ ನೆಮ್ಮದಿ ಯಿಲ್ಲ. ಕಳೆದ 35 ತಿಂಗಳ ಆಡಳಿತದಲ್ಲಿ ಹಾಲಿನ ದರ, ಬಸ್ ಪ್ರಯಾಣ ದರ ಸೇರಿದಂತೆ ದಿನಬಳಕೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಲಾಗಿದೆ. ಗ್ಯಾರಂಟಿಗಳ ಮೂಲಕ ಒಂದು ಕೈಯಲ್ಲಿ ಹಣ ನೀಡಿ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ರೂಪದಲ್ಲಿ ಜನ ರಿಂದಲೇ ಹಣ ವಸೂಲಿ ಮಾಡುತ್ತಿದೆ ಎಂದು ದೂರಿದರು.ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಬಸ್ಗಳ ನಿರ್ವಹಣೆಯೇ ಸಮರ್ಪಕವಾಗಿಲ್ಲ. ಸುಮಾರು 30 ಕಿ.ಮೀ. ಪ್ರಯಾಣದ ಅಂತರ ದಲ್ಲಿಯೇ 4-5ಬಸ್ಗಳು ಮಾರ್ಗಮಧ್ಯೆ ಕೆಟ್ಟು ನಿಲ್ಲುವ ಪರಿಸ್ಥಿತಿ ಇದೆ. ಇದರಿಂದ ಪ್ರಯಾಣಿಕರು ಬಸ್ ಕೆಟ್ಟು ನಿಂತರೆ ಮುಂದಿನ ಊರಿಗೂ ಹೋಗಲಾಗದೆ, ಹಿಂದಿನ ಊರಿಗೂ ಮರಳಲಾಗದೆ ಪರದಾಡುವಂತಾಗಿದೆ. ಮೊದಲು ಬಸ್ಗಳ ನಿರ್ವಹಣೆ ಸುಧಾರಿಸಿ, ಪ್ರಯಾಣಿಕರಿಗೆ ಸಮರ್ಪಕ ಸೇವೆ ಒದಗಿಸಬೇಕು. ಅದನ್ನು ಬಿಟ್ಟು ಸರ್ಕಾರ ಪ್ರಯಾಣ ದರ ಹೆಚ್ಚಿಸಿರುವುದು ಆಡಳಿತ ವೈಫಲ್ಯಕ್ಕೆ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.ಹಾಸನಾಂಬ ದರ್ಶನಕ್ಕೆ ತೆರಳಿದ್ದ ಜನರೂ ಬಸ್ ಪ್ರಯಾಣ ದರ ಇಳಿಸುವಂತೆ ಸರ್ಕಾರಕ್ಕೆ ಸಂದೇಶ ನೀಡಿದ್ದಾರೆ. ಜನರ ಆಕ್ರೋಶವನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರದ ಕೊನೆ ಹಂತದ ಲ್ಲಾದರೂ ಜನಪರ ಕೆಲಸಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ ಈ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರಗಳು ಸಾಮಾನ್ಯವಾಗಿ ಶೇ.2ರಿಂದ 3ರಷ್ಟು ಮಾತ್ರ ಬಸ್ ಪ್ರಯಾಣ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಕಳೆದ ಮೂರು- ನಾಲ್ಕು ತಿಂಗಳಿಂದ ಹಣ ಜಮೆಯಾಗಿಲ್ಲ. ದೀಪಾವಳಿ ವೇಳೆಗೆ ಹಣ ಪಾವತಿಸುವುದಾಗಿ ಭರವಸೆ ನೀಡಿದ್ದ ಸರ್ಕಾರ ಅದನ್ನೂ ಈಡೇರಿಸಿಲ್ಲ ಎಂದು ಆರೋಪಿಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ, ನಗರಾಧ್ಯಕ್ಷ ಪುಷ್ಪರಾಜ್, ಗ್ರಾಮಾಂತರ ಅಧ್ಯಕ್ಷ ವಿಜಯ್ಕುಮಾರ್, ಆಲ್ದೂರು ಮಂಡಲ ಅಧ್ಯಕ್ಷ ರವಿ, ಮೂಡಿಗೆರೆ ಅಧ್ಯಕ್ಷ ಗಜೇಂದ್ರ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.