ಡಿವೈಡರ್‌ಗೆ ಬಸ್ ಡಿಕ್ಕಿ: ನಾಲ್ವರು ಸಾವು

KannadaprabhaNewsNetwork |  
Published : Mar 24, 2026, 01:30 AM IST
ಪೋಟೊ೨೩ಸಿಪಿಟಿ೧: ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಅಪಘಾತಕ್ಕೆ ಈಡಾದ ಬಸ್. | Kannada Prabha

ಸಾರಾಂಶ

ಚನ್ನಪಟ್ಟಣ: ಕೇರಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಟ್ರಾವೆಲ್ಸ್ ಬಸ್ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿಯ ಎಕ್ಸ್‌ಪ್ರೆಸ್ ಹೈವೆಯಲ್ಲಿ ಅಪಘಾತಕ್ಕಿಡಾಗಿ ನಾಲ್ವರು ಮೃತಪಟ್ಟಿರುವ ಘಟನೆ ಸೋಮವಾರ ನುಸುಕಿನ ಜಾವ ನಡೆದಿದೆ.

ಚನ್ನಪಟ್ಟಣ: ಕೇರಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಟ್ರಾವೆಲ್ಸ್ ಬಸ್ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿಯ ಎಕ್ಸ್‌ಪ್ರೆಸ್ ಹೈವೆಯಲ್ಲಿ ಅಪಘಾತಕ್ಕಿಡಾಗಿ ನಾಲ್ವರು ಮೃತಪಟ್ಟಿರುವ ಘಟನೆ ಸೋಮವಾರ ನುಸುಕಿನ ಜಾವ ನಡೆದಿದೆ.

ಬೆಂಗಳೂರಿನ ಕಲಾಸಿಪಾಳ್ಯದ ರಶೀದ್(೪೫), ಕೇರಳದ ಕೊಹಿಲೋಡ್‌ನ ಮಹಮದ್ ಫರ್ಹಾನ್(೨೨), ಬೆಂಗಳೂರಿನ ಆನೆಪಾಳ್ಯ ಮೇನ್‌ರೋಡ್‌ನ ಸಕೀರ್ ಹುಸೇನ್(೨೭), ಪಾಂಡಿಚೇರಿಯ ಸುಲೈ(೧೮) ಮೃತಪಟ್ಟ ದುರ್ದೈವಿಗಳು.

ಕೇರಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ ಚಾಲಕನ ಕ್ಯಾಬಿನ್‌ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಕ್ಯಾಬಿನ್‌ನಲ್ಲಿದ್ದವರು ಮಾತ್ರ ಮೃತ: ಬಸ್‌ನಲ್ಲಿ ೪೦ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅಪಘಾತದ ವೇಳೆ ಚಾಲಕನ ಕ್ಯಾಬಿನ್‌ನಲ್ಲಿ ಕುಳಿತಿದ್ದ ಐವರಲ್ಲಿ ನಾಲ್ವರು ಮೃಪಟ್ಟಿದ್ದಾರೆ. ಉಳಿದ ಪ್ರಯಾಣಿಕರು ಅದೃಷ್ಟವಸಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ದೇಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಒಪ್ಪಿಸಲಾಗಿದೆ. ಈ ಸಂಬಂಧ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ಕ್ಕೆ ಹಿಂದೂ ಹೋರಾಟಗಾರಿಗೆ ಅಧಿಕಾರ ಸಿಕ್ಕರೆ ಕ್ರಾಂತಿ: ಬಸನಗೌಡ ಪಾಟೀಲ್ ಯತ್ನಾಳ್
ಹೊಳೆನರಸೀಪುರದಲ್ಲಿ ಕೈವಾರ ತಾತಯ್ಯ ಜಯಂತಿ