ಶಿವಮೊಗ್ಗ: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮಹಿಳಾ ಪ್ರವಾಸಿಗರಿದ್ದ ಟೂರಿಸ್ಟ್ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಎಸ್.ಎಸ್.ಬೋಗ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಚರಣೆ ನಡೆಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯ ನಿಟ್ಟುವಳ್ಳಿಯಿಂದ 24 ಜನ ಮಹಿಳಾ ಪ್ರವಾಸಿಗರು ಕೊಲ್ಲೂರು- ಸಿಗಂದೂರು- ಬಳೆ ಪದ್ಮಾವತಿ ದೇವಸ್ಥಾನಕ್ಕೆ ಬಂದಿದ್ದರು.ನಿಟ್ಟುವಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು, ಕೊಲ್ಲೂರು-ಸಿಗಂದೂರು ದರ್ಶನ ಪಡೆದು, ಬಳೆ ಪದ್ಮಾವತಿ ದೇವಾಲಯಕ್ಕೆ ತೆರಳುವ ವೇಳೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದರಿಂದ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ರಸ್ತೆ ಪಕ್ಕದ ಮನೆ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಮನೆಗೆ ಹಾನಿಯಾಗಿದೆ.ಅಪಘಾತದಲ್ಲಿ ಬಸ್‌ನಲ್ಲಿದ್ದ 8 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳಿಗೆ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.