ಚಲಿಸುತ್ತಿದ್ದ ಲಾರಿಗೆ ಬಸ್ ಡಿಕ್ಕಿ: ಚಾಲಕ ಸೇರಿ ಇಬ್ಬರ ಸಾವು

KannadaprabhaNewsNetwork |  
Published : Jul 08, 2026, 01:15 AM IST
 ಸಿಕೆಬಿ-5 ಬಸ್  ಅಪಘಾತಕ್ಕೀಡಾಗಿದ್ದ ಸ್ಥಳಕ್ಕೆ   ಪೋಲಿಸ್ ವರಿಷ್ಠಧಿಕಾರಿ ಕುಶಲ್ ಚೌಕ್ಸೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು | Kannada Prabha

ಸಾರಾಂಶ

ಬಸ್ ಮುಂಜಾನೆ 4.30ರಲ್ಲಿ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಸಾಗುವಾಗ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ಲಾರಿಗೆ ಆಂಧ್ರಪ್ರದೇಶ ಸಾರಿಗೆ ಬಸ್ ಡಿಕ್ಕಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು – ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44 ರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಸೋಮವಾರ ಮುಂಜಾನೆ ಸಂಭವಿಸಿದೆ.

ಆಂಧ್ರಪ್ರದೇಶದ ಕರ್ನೂಲಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಮುಂಜಾನೆ 4.30ರಲ್ಲಿ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಸಾಗುವಾಗ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಂಧ್ರಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಲಕ್ಷ್ಮಣ್ (52) ಹಾಗೂ ಪ್ರಯಾಣಿಕ ಬೆಂಗಳೂರಿನ ಕಲ್ಯಾಣ ನಗರದ ನಿವಾಸಿ ಉಮಾಕಾಂತ್ ರಾವ್ (77) ಪ್ರಯಾಣಿಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೀಟಿನಲ್ಲೇ ಸಿಲುಕಿಕೊಂಡಿದ್ದರು. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೆರೇಸಂದ್ರ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್ ಮುಂಭಾಗವನ್ನ ಎಳೆದು ಚಾಲಕನ ಮೃತದೇಹವನ್ನ ಹೊರತೆಗೆದರು. ಪ್ರಯಾಣಿಕನ ಮೃತದೇಹವನ್ನ ಬಸ್‌ ನ ಕಿಟಕಿ ಮೂಲಕ ಪೊಲೀಸರು ಹೊರತೆಗೆದ ದೃಶ್ಯ ಮನಕಲಕುವಂತಿತ್ತು.

ಪೊಲೀಸರು ಮೃತ ದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದು, ಅಪಘಾತಕ್ಕೀಡಾಗಿದ್ದ ಬಸ್ ಹಾಗೂ ಲಾರಿಯನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನಾ ಸ್ಥಳಕ್ಕೆ ಪೋಲಿಸ್ ವರಿಷ್ಠಧಿಕಾರಿ ಕುಶಲ್ ಚೌಕ್ಸೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿಕೆಬಿ-5 ಬಸ್ ಅಪಘಾತಕ್ಕೀಡಾಗಿದ್ದ ಸ್ಥಳಕ್ಕೆ ಪೋಲಿಸ್ ವರಿಷ್ಠಧಿಕಾರಿ ಕುಶಲ್ ಚೌಕ್ಸೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಳಯ್ಯ ಸ್ವಾಮೀಜಿ ಮೇಲಿನ ಹಲ್ಲೆಗೆ ಆಕ್ರೋಶ
ಗಂಗೆ ಬಾರೆ, ತುಂಗೆ ಬಾರೆ.. ಬಾರೆ ನೀರೇ.. ದಾಹ ತೀರೆ