ಮರಕ್ಕೆ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಾಯ

KannadaprabhaNewsNetwork |  
Published : Jul 04, 2026, 02:15 AM IST
ಗಾಯಾಳುಗಳನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.ಮರಕ್ಕೆ ಡಿಕ್ಕಿಯಾಗಿರುವ ಬಸ್‌. | Kannada Prabha

ಸಾರಾಂಶ

ಲಕ್ಷ್ಮೇಶ್ವರದಿಂದ ಗುತ್ತಲ ಗ್ರಾಮಕ್ಕೆ ಹೋಗುತ್ತಿರುವ ವೇಳೆ ಶಿಗ್ಲಿ- ದೊಡ್ಡೂರು ಮಧ್ಯೆ ನಿರ್ಮಿಸುತ್ತಿರುವ ಸೇವೆಯ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿನ ಕೆಸರು ರಸ್ತೆಯಲ್ಲಿ ಜಾರಿದ ಬಸ್ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ- ದೊಡ್ಡೂರು ರಸ್ತೆಯಲ್ಲಿ ನಿರ್ಮಿಸುತ್ತಿರುವ ಸೇತುವೆಯ ಪಕ್ಕದಲ್ಲಿನ ಕಚ್ಚಾ ರಸ್ತೆಯಲ್ಲಿ ಬಸ್ ಸಾಗುತ್ತಿರುವಾಗ ಕೆಸರಿನಲ್ಲಿ ಜಾರಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ಗಾಯಗೊಂಡವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಲಕ್ಷ್ಮೇಶ್ವರದಿಂದ ಗುತ್ತಲ ಗ್ರಾಮಕ್ಕೆ ಹೋಗುತ್ತಿರುವ ವೇಳೆ ಶಿಗ್ಲಿ- ದೊಡ್ಡೂರು ಮಧ್ಯೆ ನಿರ್ಮಿಸುತ್ತಿರುವ ಸೇವೆಯ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿನ ಕೆಸರು ರಸ್ತೆಯಲ್ಲಿ ಜಾರಿದ ಬಸ್ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಲ್ಲಿ ಹಲವರ ಕೈ- ಕಾಲುಗಳು ಮುರಿದಿವೆ. ಹಲವರಿಗೆ ತಲೆ, ಎದೆ, ಬೆನ್ನು, ಸೊಂಟಕ್ಕೆ ಏಟು ಬಿದ್ದಿದೆ.

ಶುಕ್ರವಾರ ಲಕ್ಷ್ಮೇಶ್ವರ ಪಟ್ಟಣದ ಸಂತೆ ದಿನವಾಗಿದ್ದರಿಂದ ಬಸ್ಸಿನಲ್ಲಿ 90ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು ಗಾಯಗೊಂಡವರನ್ನು ಲಕ್ಷ್ಮೇಶ್ವರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟರು, ನಂತರ ಪ್ರಥಮ ಚಿಕಿತ್ಸೆ ನೀಡಿ ಗದಗ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದ್ದು. ಪಿಎಸ್‌ಐ ನಾಗರಾಜ ಗಡದ ಹಾಗೂ ಟಿ.ಕೆ. ರಾಠೋಡ ಹಾಗೂ ಸಿಬ್ಬಂದಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಬೈಕ್‌ ಡಿಕ್ಕಿ: ಪಾದಚಾರಿ ಸಾವು

ಮುಂಡರಗಿ: ಪಟ್ಟಣದ ಕೊಪ್ಪಳ ವೃತ್ತದ ಕೊಪ್ಪಳ ರಸ್ತೆಯಲ್ಲಿ ಶುಕ್ರವಾರ ಪಾದಚಾರಿಗೆ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಮೃತ ವ್ಯಕ್ತಿಯನ್ನು ಪಟ್ಟಣದ ಕೋಟೆ ಭಾಗದ ಶಿವಾನಂದ ಪರಶುರಾಮಪ್ಪ ಉಳ್ಳಾಗಡ್ಡಿ(46) ಎಂದು ಗುರುತಿಸಲಾಗಿದೆ. ಶಿವಾನಂದ ಅನ್ನದಾನೀಶ್ವರ ಬೋರ್ಡಿಂಗ್(ಹಾಸ್ಟೆಲ್) ಮುಂದೆ ನಡೆದುಕೊಂಡು ಹೆಗ್ಗಡಾಳ ಅವರ ಕಿರಾಣಿ ಅಂಗಡಿ ಕಡೆಗೆ ತೆರಳುವ ಸಂದರ್ಭದಲ್ಲಿ ಕೊಪ್ಪಳ ಕಡೆಯಿಂದ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ. ಆಗ ಶಿವಾನಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಕೊಟ್ಟ ಮುಂಗಾರು; ಗುರ್ಜಿ ಆಟ, ಪ್ರಾರ್ಥನೆ
ಸೌರ ಶಕ್ತಿ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಭೀಮಣ್ಣ