ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ಪಿ.ಜಿ.ವಿದ್ಯಾರ್ಥಿಗಳ ವೇದಿಕೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಒಂದು ಸಂಸ್ಥೆಯಲ್ಲಿ ಹಣಕಾಸು ಅಧಿಕಾರಿಯ ಪಾತ್ರ ಕಾರಿಗೆ ಬ್ರೇಕ್ ಇದ್ದಂತೆ ಅತ್ಯಂತ ಪ್ರಮುಖವಾದುದು. ಸಂಸ್ಥೆಯಲ್ಲಿ ಪ್ರತಿಯೊಬ್ಬರು ಮುಖ್ಯರಾದರೂ, ಹಣಕಾಸು ಅಧಿಕಾರಿ ಹೆಚ್ಚು ಪ್ರಮುಖರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.ವಿದ್ಯಾರ್ಥಿಗಳು ಭಯವನ್ನು ಮೆಟ್ಟಿ ನಿಲ್ಲಬೇಕು, ವೇಗವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಹಾಗೂ ಸಮಯ ಮತ್ತು ಹಣವನ್ನು ವ್ಯರ್ಥ ಮಾಡಬಾರದು ಎಂದ ಅವರು, ಉತ್ತಮ ತಂಡವನ್ನು ಕಟ್ಟಲು ನೆಟ್ ವರ್ಕಿಂಗ್ ಮತ್ತು ಸಂವಹನ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವುದು ಅತ್ಯಗತ್ಯ. ಜಂಟಿ ಕಾರ್ಯ ಅಥವಾ ಸಾಂಘಿಕ ಶ್ರಮವೇ ಯಶಸ್ಸಿಗೆ ಕಾರಣವಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಮರೀಗೌಡ ಮಾತನಾಡಿ, ಪಿ.ಜಿ ಕೇಂದ್ರದಲ್ಲಿ ಎಂ.ಕಾಂ ಮತ್ತು ಎಂ.ಸಿ.ಎ ವಿಭಾಗಗಳ ವತಿಯಿಂದ ಆಯೋಜಿಸಲಾಗಿದ್ದ ಸೆಮಿನಾರ್‌ಗಳು, ಕಾರ್ಯಾಗಾರಗಳು ಹಾಗೂ ವಿಶೇಷ ಉಪನ್ಯಾಸಗಳ ಕುರಿತು ಮಾಹಿತಿ ನೀಡಿದರು.
ಅತಿಥಿಗಳಾಗಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ. ವಿಶ್ವನಾಥ್ ಮಾತನಾಡಿ, ಪ್ರತಿಯೊಬ್ಬರೂ ಮೆದುಳಿನ ಎಡ ಮತ್ತು ಬಲ ಎರಡೂ ಭಾಗಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚಿಸಿದರು. ಹೆಚ್ಚಿನ ಜನರು ಎಡಭಾಗದ ಮೆದುಳನ್ನು ಬಳಸುವುದಿಲ್ಲ. ಆದರೆ ಇದು ಹೆಚ್ಚಿನ ನೆನಪಿನ ಶಕ್ತಿಯನ್ನು ಹೊಂದಿದ್ದು, ಅತ್ಯಂತ ಚುರುಕಾಗಿರುತ್ತದೆ. ವಿದ್ಯಾರ್ಥಿಗಳು ತಾವು ಓದಿದ್ದನ್ನು ಕಾಲಕಾಲಕ್ಕೆ ನೆನಪಿಸಿಕೊಳ್ಳುತ್ತಿರಬೇಕು. ಇದು ಪರೀಕ್ಷೆಯ ಸಮಯದಲ್ಲಿ, ಸಂದರ್ಶನಗಳನ್ನು ಎದುರಿಸುವಾಗ ಅಥವಾ ಯಾರೊಂದಿಗಾದರೂ ಮಾತನಾಡುವಾಗ ಸಹಾಯ ಮಾಡುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಧಕರಾಗಬೇಕು ಎಂದು ಆಶಿಸಿದ ಅವರು, ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಯಶಸ್ಸನ್ನು ಕೋರಿದರು.
ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.