)
ಕನ್ನಡಪ್ರಭ ವಾರ್ತೆ ಮೂಡಲಗಿ
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, 2013-14 ರಿಂದ 2018-19ರ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು ₹ 981 ಕೋಟಿ ಸಾಲದ ಪೈಕಿ ₹ 714 ಕೋಟಿ ಬಾಕಿ ವಸೂಲಾತಿಗಾಗಿ ಒಂದು ಬಾರಿ ಇತ್ಯರ್ಥ(ಓಟಿಎಸ್) ಯೋಜನೆ ತರಲಾಗಿದೆ. ಇದು ಒಂದು ಸಮುದಾಯವನ್ನು ಓಲೈಸುವ ಹಿತಾಸಕ್ತಿಯೇ ಹೊರತು ಸಾಮಾಜಿಕ ನ್ಯಾಯವಲ್ಲ. ಸರ್ಕಾರದ ಈ ಧೋರಣೆ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಯಾಕೆ ಎಂದು ಪ್ರಶ್ನಿಸಿದ್ದಾರೆ.ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಸಾಲ ತೆಗೆದುಕೊಂಡಿದ್ದಾರೆ. ಇದೇ ರೀತಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಲಂಬಾಣಿ ಅಭಿವೃದ್ಧಿ ನಿಗಮ, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ ಎಲ್ಲಾ ಸಮುದಾಯಗಳು ಹಿಂದುಳಿದಿವೆ ಎಂದು ಆ ನಿಗಮಕ್ಕೆ ಸಾಲ ಕೊಟ್ಟಿದ್ದಾರೆ. ಅದರ ಸಾಲ ಮನ್ನಾ ಮಾಡಲಿಲ್ಲ. ಇದು ಓಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರ್ಕಾರದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಸಚಿವರ ವಿರುದ್ಧ ಗುಡುಗಿದ ಅವರು, ಈ ಸಮುದಾಯದ ಸಚಿವರು ಮತ್ತು ಶಾಸಕರು ಕೇವಲ ಮಂತ್ರಿ ಸ್ಥಾನಕ್ಕಾಗಿ ಅಥವಾ ಮುಖ್ಯಮಂತ್ರಿಯಾಗಲು ಹೋರಾಟ ಮಾಡುತ್ತಾರೆಯೇ ಹೊರತು, ತಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನಿಸುವ ತಾಕತ್ತು ತೋರುತ್ತಿಲ್ಲ. ಇದು ಸಮುದಾಯಕ್ಕೆ ಮಾಡುತ್ತಿರುವ ದ್ರೋಹ ಎಂದರು.ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮೃತ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಹಣವಿಲ್ಲ ಎನ್ನುವ ಸರ್ಕಾರಕ್ಕೆ ಒಂದು ಸಮುದಾಯದ ಸಾಲ ಮನ್ನಾ ಮಾಡಲು ಎಲ್ಲಿಂದ ಹಣ ಬರುತ್ತದೆ?. ತಕ್ಷಣವೇ ರಾಜ್ಯದ ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿದರು.