ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಲಿ

KannadaprabhaNewsNetwork |  
Published : Jul 26, 2024, 01:38 AM IST
41 | Kannada Prabha

ಸಾರಾಂಶ

ಹೆಣ್ಣು ಮಕ್ಕಳಿಗೆ ಸಮಾನತೆ ದೊರಕುವಂತಾಗಬೇಕು. ಅಸಮಾನತೆ ನಿಲ್ಲಬೇಕು,

ಕನ್ನಡಪ್ರಭ ವಾರ್ತೆ ಮೈಸೂರು

ನಗರದ ವರ್ತಲ ರಸ್ತೆಯ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ ಏರ್ಪಡಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶ್ವೇತಾ ಮಾತನಾಡಿ, ಹೆಣ್ಣು ಮಕ್ಕಳಿಗೆ ಸಮಾನತೆ ದೊರಕುವಂತಾಗಬೇಕು. ಅಸಮಾನತೆ ನಿಲ್ಲಬೇಕು, ಹೆಣ್ಣು ಮಗುವಿಗೆ ಶಿಕ್ಷಣ ನೀಡಿದಾಗ ಇಡೀ ಕುಟುಂಬ ಮಾತ್ರವಲ್ಲ ಸಮಾಜವು ಉದ್ಧಾರವಾಗಲು ಸಾಧ್ಯವಾಗುತ್ತದೆ. ಹೆಣ್ಣು ಮಕ್ಕಳಿಗೆ ಇನ್ನು ಹೆಚ್ಚು ಅವಕಾಶ ಸಿಕ್ಕಲ್ಲಿ ಮಹಿಳೆಯರು ತಮ್ಮ ಪ್ರತಿಭೆ ಹೊರಹಾಕಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲ ಮಾನಸಾ ಅಧ್ಯಕ್ಷತೆವಹಿಸಿ ಮಾತನಾಡಿ, ಇಂದು ನಾವು ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ ಮಹಿಳೆಯರು ಶಿಕ್ಷಣ, ಸಾಮಾಜಿಕ, ರಾಜಕೀಯ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯ ಸಾಧನೆ ಮಾಡಲು ಪ್ರೇರೇಪಿಸಬೇಕು. ಮೂಢನಂಬಿಕೆ ಹೊಗಲಾಡಿಸಿ ವೈಚಾರಿಕತೆಯ ಹಿನ್ನೆಲೆಯಲ್ಲಿ ಪ್ರಜ್ಞಾವಂತರಾಗಿ ಮುನ್ನಡೆಯಬೇಕು ಎಂದು ಅವರು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆರು ಮತ್ತು ಸಾಮಾಜಿಕ ಕಾರ್ಯಕರ್ತೆಯರು ಭಾಗವಹಿಸಿ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ