ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ-2026ರ ಮತ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ, ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಡಾ.ವೀರಣ್ಣ ಚರಂಟಿಮಠ ಅವರಿಗಿಂದ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ-2026ರ ಮತ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ, ಪ್ರತಿಸ್ಪರ್ಧಿ ಭಾರತೀಯ ಜನತಾ ಪಕ್ಷದ ಡಾ.ವೀರಣ್ಣ ಚರಂಟಿಮಠ ಅವರಿಗಿಂದ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಚುನಾವಣಾಧಿಕಾರಿಗಳು ಆಗಿರುವ ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ ಗೆಲವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು 98,919 ಮತ ಪಡೆದು ಗೆಲುವು ಸಾಧಿಸಿದರೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ 76,587 ಮತ ಪಡೆದು ಪರಾಜಯ ಹೊಂದಿದ್ದಾರೆ. ಉತ್ತಮ ಪ್ರಜಾಕೀಯ ಪಾರ್ಟಿಯ ಅಂತೋಷ ಸವ್ವಾಸೆ 512 ಮತ ಪಡೆದರೆ, ಬ್ಲೂ ಇಂಡಿಯಾ ಪಾರ್ಟಿಯ ತಳವಾರ ಶಿವಕುಮಾರ 112, ಜನತಾ ಚಳವಳಿ ಭಾರತ ಪಕ್ಷದ ತೋಜೋರಾಮಶೆಟ್ಟಿ ದೇವಾಂಗ 62, ಕರ್ನಾಟಕ ರಕ್ಷಾ ಸಮಿತಿಯ ನಾಗರಾಜ ಕಲಕುಟಗರ 154, ಆಲ್ ಇಂಡಿಯಾ ಜನರಕ್ಷಾ ಪಾರ್ಟಿಯ ಸಿದ್ದಪ್ಪ ಗೋಡಿ 131, ಪಕ್ಷೇತರ ಅಭ್ಯಥಿಗಳಾದ ಆನಂದ ಜಕಾತಿ 198, ರವಿ ಶಿವಪ್ಪ ಪಡಸಲಗಿ 389 ಮತ ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಉಪ ಚುನಾವಣೆ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಒಟ್ಟು 2,60,182 ಮತಗಳ ಪೈಕಿ 1,77,073 ಮತಗಳು ಚಲಾವಣೆಗೊಂಡಿದ್ದು, 1458 ಮತಗಳು ನೋಟಾ ಮತಗಳು ಚಲಾವಣೆಯಾಗಿವೆ. 100 ಮತಗಳು ತಿರಸ್ಕೃತಗೊಂಡಿವೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಉಮೇಶ ಮೇಟಿ ಅವರಿಗೆ ಚುನಾವಣಾಧಿಕಾರಿ ಸಂತೋಷ ಜಗಲಾಸರ ಪ್ರಮಾಣ ಪತ್ರ ವಿತರಣೆ ಮಾಡಿದರು.
ಪ್ರಮಾಣ ಪತ್ರ ವಿತರಣೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ, ಉಪ ಚುನಾವಣೆಯ ಸಾಮಾನ್ಯ ವೀಕ್ಷಕರಾದ ಪಾರುಲ್ ಪಟವಾರಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.