ಉಪ ಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್ಸಿಗರ ಸಂಭ್ರಮ ಆಚರಣೆ

KannadaprabhaNewsNetwork |  
Published : May 05, 2026, 01:30 AM IST
4ಕೆಎಂಎನ್‌ಡಿ-5ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ ಮಂಡ್ಯದ ಜಿಲ್ಲಾ ಕಾಂಗ್ರೆಸ್‌ ಕಚೇರಿ ಎದುರು ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಿಹಿ ವಿತರಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್‌ ಬೇರುಗಳು ಗಟ್ಟಿಯಾಗಿರುವುದಕ್ಕೆ ಉಪ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ಸಿದ್ದರಾಮಯ್ಯನವರ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಗೊಂದಲ ಮೂಡಿಸುವ ಪ್ರಯತ್ನ ನಡೆಸಿದರೂ ಅಂತಿಮವಾಗಿ ಕ್ಷೇತ್ರದ ಜನರು ಕಾಂಗ್ರೆಸ್‌ ಕೈ ಹಿಡಿದಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಜ್ಯದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದಕ್ಕೆ ಮಂಡ್ಯದ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಸಿಹಿ ವಿತರಿಸಿ ಸಂಭ್ರಮ ಆಚರಿಸಿದರು.

ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್‌ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಬೇರುಗಳು ಗಟ್ಟಿಯಾಗಿರುವುದಕ್ಕೆ ಉಪ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ಸಿದ್ದರಾಮಯ್ಯನವರ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಗೊಂದಲ ಮೂಡಿಸುವ ಪ್ರಯತ್ನ ನಡೆಸಿದರೂ ಅಂತಿಮವಾಗಿ ಕ್ಷೇತ್ರದ ಜನರು ಕಾಂಗ್ರೆಸ್‌ ಕೈ ಹಿಡಿದಿದ್ದಾರೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶುಭದಾಯಿನಿ ಮಾತನಾಡಿ,ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಮನಸೋತಿದ್ದಾರೆ. ಇದು2028ರ ಚುನಾವಣೆಗೆ ಇಂದು ನಡೆದ ಉಪಚುನಾವಣೆಯ ದಿಕ್ಸೂಚಿಯಾಗಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜನಪರ ಆಡಳಿತ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ವಿತರಿಸಿ ಪಟಾಕಿ ಸೇರಿಸಿ ಸಂಭ್ರಮಿಸಿದರು ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ಅಭಿಲಾಶ್, ಚನ್ನಪ್ಪ, ಗ್ಯಾರೆಂಟಿ ಉದಯ್, ಪಣಕನಳ್ಳಿ ಅರುಣ್ ಮತ್ತಿತರರು ಇದ್ದರು.

ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಆಯ್ಕೆ

ಮದ್ದೂರು:ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬ್ಯಾಡರಹಳ್ಳಿ ಅಂಕೇಗೌಡ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಸಂಘದ ಕಚೇರಿಯಲ್ಲಿ ಸಂಘದ ಉಳಿದ ಅವಧಿಗೆ ಅಧ್ಯಕ್ಷ ಸ್ಥಾನ, ರಾಜ್ಯ ಪರಿಷತ್ ಸ್ಥಾನ ಹಾಗೂ ಖಜಾಂಚಿ ಸ್ಥಾನಕ್ಕೆ ಚುನಾವಣೆ ನಿಗದಿ ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಂಕೇಗೌಡ, ಪರಿಷತ್ ಸ್ಥಾನಕ್ಕೆ ಶಿಕ್ಷಣ ಇಲಾಖೆ ಕೆ.ಮಂಜು ಹಾಗೂ ಖಜಾಂಚಿ ಸ್ಥಾನಕ್ಕೆ ಆರೋಗ್ಯ ಇಲಾಖೆಯ ಎಚ್.ಎಂ.ಮಣಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಎಸ್.ಶಂಭುಗೌಡ ಘೋಷಣೆ ಮಾಡಿದರು.ಈ ವೇಳೆ ಶಾಸಕ ಕೆ.ಎಂ.ಉದಯ್ ಹಾಗೂ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿದರು. ತಾಲೂಕು ವ್ಯಾಪ್ತಿಯಲ್ಲಿ ಈಗ ಇರುವ ಸರ್ಕಾರಿ ನೌಕರರ ಭವನವನ್ನು ವಿಸ್ತರಣೆ ಮಾಡಿ ಹೆಚ್ಚುವರಿ ಕಟ್ಟಡ ನಿರ್ಮಾಣ ಮಾಡುವ ಜೊತೆಗೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿಗಾಗಿ ಹೋರಾಟ ನಡೆಸಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ರಾಜ್ಯ ಹಿರಿಯ ಉಪಾಧ್ಯಕ್ಷ ಎಸ್. ಶಂಭುಗೌಡ, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಶ್ಚಿಮ ಬಂಗಾಳಕ್ಕೆ ಬಿಜೆಪಿಯಿಂದ ಹೊಸ ಬೆಳಕು: ಡಾ.ನಿಂಗರಾಜ್‌ಗೌಡ
ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ, ಸಿಹಿ ವಿತರಣೆ