ಉಪಚುನಾವಣೆ ರಾಜ್ಯ ರಾಜಕಾರಣದ ದಿಕ್ಸೂಚಿ

KannadaprabhaNewsNetwork |  
Published : Apr 10, 2026, 02:30 AM IST
ದತ್ತು ವಿದ್ಯಾರ್ಥಿ ಜಿಲ್ಲೆಗೆ ನಾಲ್ಕನೇ ಸ್ಥಾನ | Kannada Prabha

ಸಾರಾಂಶ

ರಾಜ್ಯದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರದ ಉಪಚುನಾವಣೆ ಮತದಾನವು ರಾಜ್ಯ ರಾಜಕಾರಣದ ದಿಕ್ಸೂಚಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರದ ಉಪಚುನಾವಣೆ ಮತದಾನವು ರಾಜ್ಯ ರಾಜಕಾರಣದ ದಿಕ್ಸೂಚಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.

ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಭಾರೀ ಅಂತರದಿಂದ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬರಿ ಎರಡು ಕ್ಷೇತ್ರಗಳಲ್ಲಿ ಮಾತ್ರ ಹಣ ಬಿಡುಗಡೆ ಆಗಿದೆ ಎನ್ನುವುದು ಶುದ್ಧ ಸುಳ್ಳು. ರಾಜ್ಯದಲ್ಲಿ ಪ್ರತಿ ತಿಂಗಳು ನಿಯಮಿತವಾಗಿ ಹಣ ಬಿಡುಗಡೆ ಆಗುತ್ತಿದೆ ಎಂದು ತಿಳಿಸಿದರು.ಬಿಜೆಪಿ ಆರೋಪಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ ಅವರು, ಬಿಜೆಪಿಯವರ ಮನೆ ದೇವರೆ ಸುಳ್ಳಾಗಿದ್ದಾನೆ. ಚುನಾವಣಾ ಆಯೋಗದ ಕಾರ್ಯವೈಖರಿಯ ಮೇಲೂ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಮುಂಗಡ ಹಣ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ನಿರ್ಬಂಧ ಹೇರಲಾಗುತ್ತಿದೆ. ಚುನಾವಣಾ ಆಯೋಗ ಪ್ರಜಾಪ್ರಭುತ್ವದಲ್ಲಿ ಪಾರದರ್ಶಕವಾಗಿ ಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದರು.ಸರ್ಕಾರದ ಸ್ಥಿರತೆ ಕುರಿತು ಪ್ರತಿಕ್ರಿಯಿಸಿದ ಅವರು, ಕರ್ನಾಟಕ ಸರ್ಕಾರ ಸುಭದ್ರವಾಗಿದೆ. ಎರಡು ಕ್ಷೇತ್ರಗಳಲ್ಲಿ ಏನಾದರೂ ಫಲಿತಾಂಶ ಬಂದರೂ ಸರ್ಕಾರಕ್ಕೆ ಯಾವುದೇ ಪರಿಣಾಮ ಇರುವುದಿಲ್ಲ ಎಂದರು.ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಆರೋಪ ವಿಚಾರ ಸೂಕ್ಷ್ಮವಾಗಿದ್ದು, ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆ ಹೊರತರುವುದು ಅಗತ್ಯ. ಸ್ವಾಮೀಜಿಯವರ ಬಗ್ಗೆ ಗೌರವವಿದೆ ಎಂದೂ ತಿಳಿಸಿದರು.ರಾಜ್ಯದಲ್ಲಿ ಅಕ್ಕ ಪಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಎರಡು ತಿಂಗಳೊಳಗೆ ಗೋಕಾಕ ಹಾಗೂ ಚಿಕ್ಕೋಡಿಯಲ್ಲಿ ಅಕ್ಕ ಪಡೆ ಸ್ಥಾಪನೆ ಮಾಡಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯೇತರ ಚಟುವಟಿಕೆಗಳಿಗೆ ವಿಟಿಯು ಆದ್ಯತೆ
ಮಸ್ಟ್ 3ನೇ ಪುಟಕ್ಕೆ.... ನೀರಿನ ಹೊಂಡಕ್ಕೆ ಬಿದ್ದು ಯುವಕ ಸಾವು