ಉಪ ಚುನಾವಣೆ: ಕಾಂಗ್ರೆಸ್ ಸಂಭ್ರಮಾಚರಣೆ

KannadaprabhaNewsNetwork |  
Published : Nov 24, 2024, 01:48 AM IST
೨೩ ಟಿವಿಕೆ ೧ - ತುರುವೇಕರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ | Kannada Prabha

ಸಾರಾಂಶ

ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಕನ್ನಡಪ್ರಭವಾರ್ತೆ, ತುರುವೇಕೆರೆ

ರಾಜ್ಯದಲ್ಲಿ ನಡೆದ ಮೂರು ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ರಾಜ್ಯದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ದಿಗ್ವಿಜಯ ಸಾಧನೆಯ ಸುದ್ದಿ ಪ್ರಕಟವಾಗುತ್ತಿದ್ದಂತೆ ಇಲ್ಲಿಯ ತಾಲೂಕು ಕಚೇರಿ ಮುಂಭಾಗ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜಯಕಾರ ಹಾಕಿದರು. ತಾಲೂಕಿನ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ ಮಾತನಾಡಿ ರಾಜ್ಯ ಸರ್ಕಾರ ಬಡವರಿಗಾಗಿ ಘೋಷಿಸಿದ್ದ ಗ್ಯಾರಂಟಿಗಳನ್ನು ಜನರು ಒಪ್ಪಿದ್ದಾರೆ ಎಂಬುದಕ್ಕೆ ಇಂದು ಜನರು ನೀಡಿರುವ ತೀರ್ಪು ನಿದರ್ಶನ. ಕಾಂಗ್ರೆಸ್ ಬಡವರ ಪಕ್ಷವಾಗಿದೆ. ಕಾಂಗ್ರೆಸ್ ಸರ್ಕಾರ ನೀಡಿದ ೫ ಗ್ಯಾರಂಟಿಗಳಿಗೆ ಜನರು ನೀಡಿರುವ ಅಂಕ ಇದಾಗಿದೆ. ೫ ಗ್ಯಾರಂಟಿಗಳು ರಾಜ್ಯದ ಪ್ರತಿಯೊಬ್ಬ ಬಡ ಜನರ ಪಾಲಿಗೆ ಆಶಾದಾಯಕವಾಗಿದೆ ಎಂದರು.ಸಿಎಸ್ ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಳಾಲ ನಾಗರಾಜ್ ಮಾತನಾಡಿ ಇಂದು ಪ್ರಕಟಗೊಂಡ ಫಲಿತಾಂಶ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಜಯಭೇರಿ ಗಳಿಸುವುದು ಸ್ಪಷ್ಠ ಎಂಬುದನ್ನು ಸಾರಿ ಹೇಳುತ್ತಿದೆ. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಸೇರಿದಂತೆ ಇತರೆ ಎಲ್ಲಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವುದರಲ್ಲಿ ಸಂಶಯವೇ ಇಲ್ಲ ಎಂದು ಕೋಳಾಲ ನಾಗರಾಜ್ ಹೇಳಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಸದಸ್ಯ ಯಜಮಾನ್ ಮಹೇಶ್, ಕಾಂಗ್ರೆಸ್ ಮುಖಂಡರಾದ ಕೆಂಪರಾಜ್, ಮಾಳೆ ಕೃಷ್ಣಪ್ಪ, ಗುಡ್ಡೇನಹಳ್ಳಿ ನಂಜುಂಡಪ್ಪ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಎನ್.ಶಶಿಶೇಖರ್, ಟೌನ್ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಎನ್.ಶಿವರಾಜ್, ಗೋಣಿ ತುಮಕೂರು ಕಾಂತರಾಜ್‌, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಜೋಗಿ ಶಿವರಾಜ್, ಡೊಂಕಿಹಳ್ಳಿ ರಾಮಣ್ಣ, ರೇವಣ್ಣ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಂಜೇಗೌಡ, ತಾಳಕೆರೆ ಮಹೇಶ್, ಬೋವಿ ಮಹಲಿಂಗಯ್ಯ, ಬಾಣಸಂದ್ರ ಸತ್ಯಣ್ಣ, ಗವಿರಂಗಯ್ಯ, ಅಫ್ಜಲ್, ಬಾಗೀರಿ ರಂಗನಾಥ್, ಬೇವಿನಹಳ್ಳಿ ಬಸವರಾಜು ಸೇರಿದಂತೆ ಹಲವರು ಇದ್ದರು.

PREV

Recommended Stories

ಉಪರಾಷ್ಟ್ರಪತಿ ಹುದ್ದೆ ರೇಸಲ್ಲಿ ರಾಜ್ಯ ಗೌರ್ನರ್‌ ಗೆಹಲೋತ್‌?
ಮಕ್ಕಳಲ್ಲಿ ಬಾಲ್ಯದಿಂದಲೇ ದೇಶಪ್ರೇಮ ತುಂಬಿ