ಬಾರುಕೋಲು ಹಿಡಿದು, ಎತ್ತಿನ ಬಂಡಿಯೇರಿದ ಬಿವೈ ವಿಜಯೇಂದ್ರ

KannadaprabhaNewsNetwork |  
Published : Nov 26, 2025, 01:30 AM IST
25ಕೆಡಿವಿಜಿ10, 11-ದಾವಣಗೆರೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಲು, ರೈತರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಾರಿಕೋಲು ಹಿಡಿದು, ಎತ್ತಿನ ಬಂಡಿಯನ್ನೇರಿ ಪ್ರತಿಭಟಿಸುತ್ತಿರುವ ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ, ಎಂ.ಪಿ.ರೇಣುಕಾಚಾರ್ಯ ಇತರರು. ...................25ಕೆಡಿವಿಜಿ12, 13-ದಾವಣಗೆರೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಲು, ರೈತರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಪ್ರತಿಭಟಿಸುವ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿ.ಟಿ.ರವಿ ಇತರರು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ...................25ಕೆಡಿವಿಜಿ14, 15, 16, 17, 18, 19-ದಾವಣಗೆರೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಲು, ರೈತರ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ಬಿ.ವೈ.ವಿಜಯೇಂದ್ರ ಮಾತನಾಡಿದರು. ಸಿ.ಟಿ.ರವಿ, ಎಂ.ಪಿ.ರೇಣುಕಾಚಾರ್ಯ, ಮಾಡಾಳ ವಿರುಪಾಕ್ಷಪ್ಪ, ನಡಹಳ್ಳಿ, ಎಸ್.ವಿ.ರಾಮಚಂದ್ರ ಇತರರು ಇದ್ದರು. | Kannada Prabha

ಸಾರಾಂಶ

ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಎತ್ತಿನ ಬಂಡಿಯನ್ನೇರಿ, ಬಾರುಕೋಲನ್ನು ಬೀಸುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟಿಸಲಾಯಿತು.

ಕನ್ನಡಪ್ರಭ ವಾರ್ತೆ ದಾವಣಗೆರೆ

ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಎತ್ತಿನ ಬಂಡಿಯನ್ನೇರಿ, ಬಾರುಕೋಲನ್ನು ಬೀಸುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಪ್ರತಿಭಟಿಸಲಾಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಎತ್ತಿನ ಬಂಡಿಯನ್ನೇರಿದ ಬಿ.ವೈ.ವಿಜಯೇಂದ್ರ, ವಿಪ ಸದಸ್ಯ ಸಿ.ಟಿ.ರವಿ, ಮಾ

ಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಇತರರು ಕೈಯಲ್ಲಿ ಬಾರುಕೋಲು ಹಿಡಿದು, ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವ ಜತೆಗೆ ರೈತರ ಸಮಸ್ಯೆ ಪರಿಹರಿಸುವಂತೆ ರಾಜ್ಯ ಸರ್ಕಾರಕ್ಕೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಎತ್ತಿನ ಬಂಡಿಯಲ್ಲೇ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು.

ನಂತರ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನಾನಿರತ ಮುಖಂಡರು, ಕಾರ್ಯಕರ್ತರು, ರೈತರನ್ನುದ್ದೇಶಿಸಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯವ್ಯಾಪಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ನಿರ್ಧಾರ. ಕಳೆದ ಕೆಲ ತಿಂಗಳಿನಿಂದ ರಾಜ್ಯದ ರೈತರ ಪರಿಸ್ಥಿತಿ ಏನಾಗಿದೆಯೆಂಬುದನ್ನು ಎಲ್ಲರೂ ಗಮನಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಬಂದಾಗಿನಿಂದ ಸಿಎಂ ಸಿದ್ದರಾಮಯ್ಯಗೆ ಒಂದು ರೀತಿ ವಕ್ರದೃಷ್ಟಿ, ರೈತರನ್ನು ಕಂಡರೆ ಅಸಹನೆಯೆಂಬಂತೆ ಕಾಣುತ್ತದೆ ಎಂದರು.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟಕ್ಕೆ ಇಂದು ದಾವಣಗೆರೆಯಲ್ಲಿ ಚಾಲನೆ ನೀಡಿದ್ದೇವೆ. ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದಿರುವುದು ಅಕ್ಷಮ್ಯ ಅಪರಾಧ. ರೈತ ವಿರೋಧಿಯಾದ ಅನಿಷ್ಟ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯದಿಂದಾಗಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಿಲ್ಲ. ಮೆಕ್ಕೆಜೋಳದ ರೈತರೂ ಹೋರಾಟ ನಡೆಸಿದ್ದಾರೆ. ಲಕ್ಷ್ಮೇಶ್ವರದಲ್ಲಿ ರೈತ ಹೋರಾಟ ನಡೆದಿದೆ. ನವಲಗುಂದಲ್ಲಿ ರೈತ ಮುಖಂಡ ಶಂಕರಣ್ಣ ಅಂಬಳಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ ಎಂದು ತಿಳಿಸಿದರು.

ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸದೇ, ಇಡೀ ಸಚಿವ ಸಂಪುಟ ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಕ್ಕೆಜೋಳ ಖರೀದಿ ಕೇಂದ್ರದ ಕುರಿತಂತೆ ಚರ್ಚಿಸಲು ಸಭೆ ಕರೆ

ದರೆ, ಅದೇ ಕೃಷಿ ಸಚಿವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ರೈತರ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂಬುದೇ ನಮ್ಮ ಮುಖ್ಯಬೇಡಿಕೆ. ರಾಜ್ಯ ಸರ್ಕಾರದ ವಿರುದ್ದ ರಾಜ್ಯದ 224 ಕ್ಷೇತ್ರಗಳಲ್ಲೂ ನ.27, 28ಕ್ಕೆ ಹೋರಾಟಕ್ಕೆ ಕರೆ ನೀಡಲಾಗಿದೆ. ಜ.1,2ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಲ್ಲೂ ಬಿಜೆಪಿ ರೈತ ಮೋರ್ಚಾ ಹೋರಾಟ ನಡೆಸಲಿದೆ ಎಂದು ಹೇಳಿದರು.

ಎಂಎಲ್‌ಸಿ ಸಿ.ಟಿ.ರವಿ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಶಾಸಕರಾದ ಮಾಡಾಳ ವಿರುಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಎಂ.ಬಸವರಾಜ ನಾಯ್ಕ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಮಾಡಾಳ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ, ಚಂದ್ರಶೇಖರ ಪೂಜಾರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಪಿ.ಸಿ.ಶ್ರೀನಿವಾಸ ಭಟ್, ಧನಂಜಯ ಕಡ್ಲೇಬಾಳ್, ಅನಿಲಕುಮಾರ ನಾಯ್ಕ, ಅಣ್ಣೇಶ, ಮಹೇಶ ಪಲ್ಲಾಗಟ್ಟಿ, ಜಿಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಮಹೇಶ, ಎಚ್.ಸಿ.ಜಯಮ್ಮ, ನೀತು, ದಾಕ್ಷಾಯಣಮ್ಮ, ಅಶ್ವಿನಿ, ಗೌತಮ್ ಜೈನ್ ಅನೇಕರು ಇದ್ದರು.

ಅಭಿವೃದ್ಧಿ ಮಾಡಿ ತೋರಿಸಿ: ರೇಣು

ಬಿಜೆಪಿಯಲ್ಲಿ ಇರುವವರು ರೈತರ ಮಕ್ಕಳಾಗಿದ್ದು, ಕಾಂಗ್ರೆಸ್‌ನಲ್ಲಿರುವವರು ಕಾರ್ಪೋರೇಟ್ ಸಂಸ್ಕೃತಿಯವರಾಗಿದ್ದು, ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದವರಿಗೆ ರೈತರ ಬಗ್ಗೆ ಕನಿಷ್ಟ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಹೊನ್ನಾಳಿಯಲ್ಲಿ ಹೊತ್ತಿದ ಕಿಚ್ಚು ರಾಜ್ಯವ್ಯಾಪಿ ಹರಡಿದ್ದು, ನಮ್ಮ ಹೋರಾಟದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನಾಮಕಾವಾಸ್ಥೆ ಸಭೆ ಮಾಡಿದ್ದರಷ್ಟೇ ಎಂದರು.

ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಏಟು ಬೀಸಲು ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ಶುರು ಮಾಡಿದ್ದೇವೆ. ಹಿಂದೆ ಯಡಿಯೂರಪ್ಪ ರೈತರಿಗೆ ಎಲ್ಲಾ ರೀತಿ ಸ್ಪಂದಿಸಿದ್ದರು. ಇದು ನಿಜ

ವಾದ ರೈತ ನಾಯಕರ ತಾಕತ್ತು. ಕಾಂಗ್ರೆಸ್ ಸರ್ಕಾರದ ನಾಯಕರ ಹಿಮ್ಮಡಿಯಲ್ಲಿ ನರಗಳೇ ಇಲ್ಲ. ಗೃಹಲಕ್ಷ್ಮಿ ಯೋಜನೆ ಆಟಕ್ಕುಂಟು, ಲೆಕ್ಕಕ್ಕಿಲ್ಲದಾಗಿದೆ. ಎಲ್ಲವೂ ಸುಳ್ಳು. ಇದು ರೈತ ವಿರೋಧಿ ಸರ್ಕಾರ ಎಂದು ದೂರಿದರು.

PREV

Recommended Stories

ವಾಟರ್‌ ಬಾಟಲ್‌ ತಯಾರಿಸಲು ಬೆಂಗಳೂರು ಜಲಮಂಡಳಿ ಸಿದ್ಧತೆ: ಶೀಘ್ರ ಮಾರುಕಟ್ಟೆಗೆ ಲಭ್ಯ
ತಾಯಿಯಿಂದಲೇ 3 ದಿನದ ಶಿಶು ಉಸಿರುಗಟ್ಟಿಸಿ ಕೊಲೆ