ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ತಾಲೂಕು ಆಸ್ಪತ್ರೆ ಭಾಗ್ಯ

KannadaprabhaNewsNetwork |  
Published : Nov 09, 2026, 02:45 AM IST
ಆಸ್ಪತ್ರೆ | Kannada Prabha

ಸಾರಾಂಶ

ಬೈಂದೂರು ಭಾಗದ ಜನರ ಬಹುದಿನಗಳ ಆರೋಗ್ಯ ಸೇವೆಯ ಬೇಡಿಕೆಗೆ ಸ್ಪಂದನೆ ದೊರೆತಿದೆ. ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ.

ಕುಂದಾಪುರ : ಬೈಂದೂರು ಭಾಗದ ಜನರ ಬಹುದಿನಗಳ ಆರೋಗ್ಯ ಸೇವೆಯ ಬೇಡಿಕೆಗೆ ಸ್ಪಂದನೆ ದೊರೆತಿದೆ. ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ.ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಹಾಗೂ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಒಟ್ಟು ₹25 ಕೋಟಿ ಅಂದಾಜು ವೆಚ್ಚದ ಕ್ರಿಯಾ ಯೋಜನೆ ರೂಪಿಸಲಾಗಿದೆ. 2026-27ನೇ ಸಾಲಿನ ಆಯವ್ಯಯದಲ್ಲಿ ಯೋಜನೆಯ ಮೊದಲ ಹಂತವಾಗಿ ₹2 ಕೋಟಿ ಅನುದಾನ ನಿಗದಿಪಡಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಅ.31ರಂದು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ವಿವಿಧ ಆರೋಗ್ಯ ಸಂಸ್ಥೆಗಳ ಮುಂದುವರಿದ ಹಾಗೂ ಹೊಸ ಕಾಮಗಾರಿಗಳಿಗೆ ಒಟ್ಟು ₹562.55 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಈ ಪಟ್ಟಿಯಲ್ಲಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಮೇಲ್ದರ್ಜೆಗೇರಿಸುವ ಕಾಮಗಾರಿಯೂ ಸೇರಿದೆ.

ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳನ್ನು ಪಡೆಯಲು ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಅನಿವಾರ್ಯತೆ ಕಡಿಮೆಯಾಗುವ ನಿರೀಕ್ಷೆಯಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸಮಯ ಹಾಗೂ ಪ್ರಯಾಣದ ವೆಚ್ಚದ ಉಳಿತಾಯದ ಜತೆಗೆ ಸುಧಾರಿತ ಆರೋಗ್ಯ ಸೇವೆ ಲಭ್ಯವಾಗಲಿದೆ.ಸಚಿವರಿಗೆ ಕೃತಜ್ಞತೆ

ಯೋಜನೆಗೆ ಸಹಕಾರ ನೀಡಿ ಅನುದಾನ ಒದಗಿಸುವಲ್ಲಿ ಮುತುವರ್ಜಿ ವಹಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರಿಗೆ ಬೈಂದೂರು ಕ್ಷೇತ್ರದ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ. ಆಸ್ಪತ್ರೆಯ ಕಟ್ಟಡ ನಿರ್ಮಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಶೀಘ್ರ ಆರಂಭಗೊಂಡು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವ ಮೂಲಕ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲಿ ಎಂದು ಅವರು ಪ್ರಕಟಣೆಯಲ್ಲಿ ಆಶಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟನ್ ಕಬ್ಬಿಗೆ ₹1,000 ಹೆಚ್ಚುವರಿ ದರ ನಿಗದಿಗೆ ಪಟ್ಟು
ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ತಕ್ಷಣ ಆರಂಭಿಸಿ