ಬೈಂದೂರು: ಎಂಸಿಸಿ ಬ್ಯಾಂಕಿನ 20ನೇ ಶಾಖೆ ಶುಭಾರಂಭ

KannadaprabhaNewsNetwork |  
Published : Aug 04, 2025, 12:30 AM IST
03ಎಂಸಿಸಿ | Kannada Prabha

ಸಾರಾಂಶ

ಬೈಂದೂರು ಮುಖ್ಯರಸ್ತೆಯ ದೀಪಾ ಕಾಂಪ್ಲೆಕ್ಸ್‌ನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆಯ ಉದ್ಘಾಟನೆ ಭಾನುವಾರ ನಡೆಯಿತು. ಬೈಂದೂರಿನ ಹೋಲಿ ಕ್ರಾಸ್ ಚರ್ಚ್ ಧರ್ಮಗುರು ವಿನ್ಸೆಂಟ್ ಕುವೆಲ್ಹೊ ಆಶೀರ್ವಚನ ನೀಡಿದರು.

ಎಸ್‌ಎಸ್‌ಎಲ್‌ಸಿ, ಪಿಯು ಸಾಧಕ ಸ್ಥಳೀಯ ವಿದ್ಯಾರ್ಥಿಗಳಿಗೆ ಸನ್ಮಾನ

ಕನ್ನಡಪ್ರಭ ವಾರ್ತೆ ಕುಂದಾಪುರಇಲ್ಲಿನ ಬೈಂದೂರು ಮುಖ್ಯರಸ್ತೆಯ ದೀಪಾ ಕಾಂಪ್ಲೆಕ್ಸ್‌ನಲ್ಲಿ ಎಂಸಿಸಿ ಬ್ಯಾಂಕಿನ 20ನೇ ಶಾಖೆಯ ಉದ್ಘಾಟನೆ ಭಾನುವಾರ ನಡೆಯಿತು.

ಈ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಬೈಂದೂರಿನ ಹೋಲಿ ಕ್ರಾಸ್ ಚರ್ಚ್ ಧರ್ಮಗುರು ವಿನ್ಸೆಂಟ್ ಕುವೆಲ್ಹೊ, ಸಮಾಜದ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ತರವಾದುದು. ಎಂಸಿಸಿ ಬ್ಯಾಂಕು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಮತ್ತು ಸ್ನೇಹಮಯಿ ಸಿಬ್ಬಂದಿಯಿಂದ ಹೆಸರುವಾಸಿಯಾಗಿದೆ. ಈ ಭಾಗದ ಜನರ ಅವಶ್ಯಕತೆಗಳನ್ನು ಪೂರೈಸುವ ಶಕ್ತಿ ಈ ಬ್ಯಾಂಕಿಗಿದೆ ಎಂದವರು ಹೇಳಿದರು.ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರ ಡೈನಾಮಿಕ್ ನಾಯಕತ್ವದಿಂದ ಬ್ಯಾಂಕು ಇಂದು ತನ್ನ 20ನೇ ಶಾಖೆಯನ್ನು ಆರಂಭಿಸಿದೆ. ದೂರದೃಷ್ಟಿಯುಳ್ಳ ಆಡಳಿತ ಮಂಡಳಿಯಿಂದಾಗಿ ಬ್ಯಾಂಕ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಮುಂದೆ ಇನ್ನಷ್ಟು ಶಾಖೆಗಳನ್ನು ತೆರೆದು ಸಾಧನೆ ಮಾಡಲಿ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ, ಸಹಕಾರರತ್ನ ಅನಿಲ್ ಲೋಬೊ ಮಾತನಾಡಿ, 113 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ಇಂದಿನ ಸ್ಪರ್ಧಾತ್ಮಕತೆಯನ್ನು ಒಳಗೊಂಡು ಕಾರ್ಯನಿರ್ವಹಿಸುತ್ತಿದೆ. 2018ರಿಂದ 2025ರ ವಿತ್ತೀಯ ವರ್ಷದಲ್ಲಿ ಅಭೂತಪೂರ್ವ ಪ್ರಗತಿಯನ್ನು ದಾಖಲಿಸಿದೆ. ಜನರ ನಂಬಿಕೆಯನ್ನು ಉಳಿಸಿಕೊಂಡು ಮುಂದುವರಿಯಲಿದೆ ಎಂದು ಭರವಸೆ ನೀಡಿದರು.ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಾಬು ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿ, ಎಂಸಿಸಿ ಬ್ಯಾಂಕಿನ ಈ ಶಾಖೆಯಿಂದ ಈ ಭಾಗದ ಕೃಷಿಕರಿಗೂ ಉತ್ತಮ ಸಹಕಾರ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.ಬೈಂದೂರು ಸೇಂಟ್ ಥಾಮಸ್ ರೆಸಿಡೆನ್ಶಿಯಲ್ ಸ್ಕೂಲ್ ಪ್ರಾಂಶುಪಾಲ ಫಿಲಿಪ್ ನೆಲಿವಿಲ್ಲ, ಉಡುಪಿ ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬೈಂದೂರು ಪಪಂ ನಾಮನಿರ್ದೇಶಿತ ಸದಸ್ಯ ಸದಾಶಿವ ಪಡುವರಿ, ಶಿರೂರು ಗ್ರಾಪಂ ಉಪಾಧ್ಯಕ್ಷ ಕಾಪ್ಸಿ ನೂರ್ ಮೊಹಮ್ಮದ್, ನಾಡದೋಣಿ ರಾಜ್ಯ ಸಂಘದ ಅಧ್ಯಕ್ಷ ನಾಗೇಶ್ ಖಾರ್ವಿ, ಬೈಂದೂರಿನ ವಕೀಲರ ಸಂಘದ ಅಧ್ಯಕ್ಷ ಮೋಬಿ ಪಿ.ಸಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಬ್ಯಾಂಕಿನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಎಲ್ರಾಯ್ ಕಿರಣ್ ಕ್ರಾಸ್ಟೊ ಸ್ವಾಗತಿಸಿದರು. ಕುಂದಾಪುರ ಶಾಖೆಯ ಮ್ಯಾನೇಜರ್ ಜ್ಯೋತಿ ಬೆರೆಟ್ಟೊ, ಸಾಧಕ ವಿದ್ಯಾರ್ಥಿಗಳ ಪರಿಚಯಿಸಿದರು. ಬೈಂದೂರು ಶಾಖೆಯ ಸೀನಿಯರ್ ಮ್ಯಾನೇಜರ್ ಸಂದೀಪ್ ಕ್ವಾಡ್ರಸ್ ವಂದಿಸಿದರು. ಸ್ಟೀವನ್ ಕೊಲೆಸೊ ಕಾರ್ಯಕ್ರಮ ನಿರ್ವಹಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ