ರೈತರಿಗೆ ಸಬ್ಸಿಡಿ, ಪ್ರಸಾದ್ ಯೋಜನೆಗೆ ಕೊಲ್ಲೂರು: ಬಿವೈಆರ್ ಮನವಿ

KannadaprabhaNewsNetwork |  
Published : Aug 08, 2025, 01:09 AM ISTUpdated : Aug 08, 2025, 01:10 AM IST
07ಬಿವೈಆರ್‌ | Kannada Prabha

ಸಾರಾಂಶ

ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿರುವ ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದ ಕೊಲ್ಲೂರು ಮೂಕಾಂಬಿಕಾ ದೇವಾಲಯದ 50 ಕಿ.ಮೀ. ವ್ಯಾಪ್ತಿಯಲ್ಲಿ ನದಿ, ಕಡಲ ತೀರಗಳು, ಗಿರಿಧಾಮಗಳು, ಹಿನ್ನೀರು ಮತ್ತು ಮುಂಬರುವ ವಾಯುನೆಲೆಗಳಿದ್ದು, ಈ ಪ್ರದೇಶವನ್ನು ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಅಭಿವೃದ್ಧಿಗೆ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ ಯೋಜನೆಯಡಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಸದರು ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಸಂಸದ ಬಿ.ವೈ. ರಾಘವೇಂದ್ರ ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕ್ಷೇತ್ರದ 3 ಬೇಡಿಕೆಗಳನ್ನು ಮನವರಿಕೆ ಮಾಡಿ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.ಸರ್ಕಾರಿ ಪ್ರಾಯೋಜಿತ ಯೋಜನೆಯಡಿಯಲ್ಲಿ ರೈತರು ಕೃಷಿ ಸಂಸ್ಕರಣಾ ಘಟಕ ಆರಂಭಿಸಲು ಶೇ.50 ಸಬ್ಸಿಡಿ ಬಿಡುಗಡೆಯಾಗಿದ್ದು, ಬಾಕಿ ನಬಾರ್ಡ್ ಸಬ್ಸಿಡಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಿದರು.

ದಕ್ಷಿಣ ಭಾರತದ ಆಧ್ಯಾತ್ಮಿಕ ಕ್ಷೇತ್ರದ ಮೂಲಾಧಾರವಾಗಿರುವ ಆದಿ ಶಂಕರಾಚಾರ್ಯರು ಪ್ರತಿಷ್ಠಾಪಿಸಿದ ಕೊಲ್ಲೂರು ಮೂಕಾಂಬಿಕಾ ದೇವಾಲಯದ 50 ಕಿ.ಮೀ. ವ್ಯಾಪ್ತಿಯಲ್ಲಿ ನದಿ, ಕಡಲ ತೀರಗಳು, ಗಿರಿಧಾಮಗಳು, ಹಿನ್ನೀರು ಮತ್ತು ಮುಂಬರುವ ವಾಯುನೆಲೆಗಳಿದ್ದು, ಈ ಪ್ರದೇಶವನ್ನು ಭೌಗೋಳಿಕತೆ ಮತ್ತು ಆಧ್ಯಾತ್ಮಿಕತೆಯ ಸಮಗ್ರ ದೃಷ್ಟಿಯಿಂದ ಅಭಿವೃದ್ಧಿಗೆ ಪ್ರವಾಸೋದ್ಯಮ ಸಚಿವಾಲಯದ ಪ್ರಸಾದ್ ಯೋಜನೆಯಡಿ ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಸದರು ಮನವಿ ಮಾಡಿದರು.ಉಡುಪಿ, ಮಂಗಳೂರಿಗೆ ಸಿಜಿಎಚ್‌ಎಸ್:

ತಮ್ಮ ಮನವಿಯಂತೆ ರಾಜ್ಯ - ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಅವರ ಕುಟುಂಬಗಳಿಗಾಗಿ ಶಿವಮೊಗ್ಗ, ಉಜಡುಪಿ ಮತ್ತು ಮಂಗಳೂರಲ್ಲಿ ಸಿಜಿಎಚ್‌ಎಸ್ ಕ್ಷೇಮ ಕೇಂದ್ರಗಳು ಮಂಜೂರಾಗಿದ್ದು, ಅವುಗಳ ಕಾರ್ಯಾರಂಭಕ್ಕೆ ಅಗತ್ಯ ಹುದ್ದೆಗಳ ಮಂಜೂರಾತಿ ಮತ್ತು ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವಂತೆಯೂ ಕೋರಿದರು.ಹಣಕಾಸು ಸಚಿವೆ, ಪ್ರತಿಯೊಂದು ವಿಷಯಗಳ ಬಗ್ಗೆ ಸೂಕ್ತ ವಿವರಣೆಯನ್ನು ಪಡೆದು, ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಅನುದಾನವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು ಎಂದು ಸಂಸದರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ