ಸಿ.ಎಸ್‌.ನಾಡಗೌಡರಿಗೆ ಸಚಿವ ಸ್ಥಾನ ನೀಡಿ: ಸಂಗನಗೌಡ ಆಗ್ರಹ

KannadaprabhaNewsNetwork |  
Published : Jan 05, 2025, 01:31 AM IST

ಸಾರಾಂಶ

ಸಚಿವ ಸಂಪುಟ ವಿಸ್ತರಣೆಯಲ್ಲಿ ಮುದ್ದೇಬಿಹಾಳ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಕಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರನ್ನು ಈ ಬಾರಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿ ಮತಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಸಿಎಂ ಸಿದ್ದರಾಮಯ್ಯನವರು ಉಳಿಸಿಕೊಳ್ಳಬೇಕು ಎಂದು ದಿ.ಕರ್ನಾಟಕ ಕೋ ಆಪರೇಟಿವ್‌ ಬ್ಯಾಂಕ್‌ ನಿರ್ದೇಶಕ ಸಂಗನಗೌಡ ಬಿರಾದಾರ(ಜಿಟಿಸಿ) ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಸಚಿವ ಸಂಪುಟ ವಿಸ್ತರಣೆಯಲ್ಲಿ ಮುದ್ದೇಬಿಹಾಳ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಕಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರನ್ನು ಈ ಬಾರಿ ಸಂಪುಟ ದರ್ಜೆ ಸಚಿವ ಸ್ಥಾನ ನೀಡಿ ಮತಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಸಿಎಂ ಸಿದ್ದರಾಮಯ್ಯನವರು ಉಳಿಸಿಕೊಳ್ಳಬೇಕು ಎಂದು ದಿ.ಕರ್ನಾಟಕ ಕೋ ಆಪರೇಟಿವ್‌ ಬ್ಯಾಂಕ್‌ ನಿರ್ದೇಶಕ ಸಂಗನಗೌಡ ಬಿರಾದಾರ(ಜಿಟಿಸಿ) ಆಗ್ರಹಿಸಿದರು.

ಪಟ್ಟಣದ ರಾಂಪೂರ ಕಾಂಪ್ಲೆಕ್ಸ್‌ನ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ)ಯವರು ಕಳೆದ ಆರು ಬಾರಿ ಶಾಸಕರಾಗಿ ಹಿಂದಿನ ಸಿಎಂ ಎಸ್.ಬಂಗಾರಪ್ಪನವರ ನೇತೃತ್ವದ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ, ದೆಹಲಿ ವಿಶೇಷ ಪ್ರನಿಧಿಯಾಗಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ ಹಿರಿಯ ಅನುಭವಿ ಹಾಗೂ ಸರಳ ಸೌಜ್ಜನ ಸ್ವಚ್ಛ ರಾಜಕಾರಿಣಿಯಾಗಿ ಬೆಳದು ಬಂದವರು. ಅವರ 40 ವರ್ಷಗಳ ರಾಜಕೀಯ ಜೀವನದಲ್ಲೊ ಒಂದೂ ಕಪ್ಪು ಚುಕ್ಕೆಯಿಲ್ಲದೇ ಜನಾನುರಾಗಿಯಾಗಿ, ಕ್ರೀಯಾಶಿಲರಾಗಿ ಪಕ್ಷ ಸಂಘಟನೆಯಲ್ಲಿತಮ್ಮನ್ನು ತಾವು ತೊಡಗಿಸಿಕೊಂಡು 2023ರಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ತಮ್ಮ ಗೇಲುವಿನ ಜೊತೆಗೆ ಇಡೀ ರಾಜ್ಯದಾಧ್ಯಂತ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚು ಸ್ಥಾನಗಳಳ್ಲಿ ಗೆಲ್ಲಿಸುವಂತೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ರಾಮಯ್ಯನವರ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರವರ ಕೈಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ, ಯುವ ನಾಯಕ ರಾಹುಲ ಗಾಂಧಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಸೇರಿದಂತೆ ಹಲವಾರು ನಾಯರುಗಳಿಗೆ ನಿಕಟ ವ್ಯಕ್ತಿಗಳಾಗಿ ರಾಜ್ಯದ ಸಂಭಾವಿತ ಏಕೈಕ ನಾಯಕರಾಗಿದ್ದಾರೆ. ಸದ್ಯ ಈಗಾಗಲೇ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕುತ್ತಿರುವ ಬಗ್ಗೆ ಎಲ್ಲೆಡೆ ವ್ಯಾಪಕ ಚರ್ಚೆ ಪ್ರಾರಂಭಗೊಂಡಿದೆ. ಈ ವೇಳೆ ಕಾರಣ ಈ ಬಾರಿ ಮುಖ್ಯಮಂತ್ರಿ ಸಿದ್ರಾಮಯ್ಯನವರು ಹಾಗೂ ಡಿ.ಕೆ.ಶಿವಕುಮಾರವರು ಸಿ.ಎಸ್.ನಾಡಗೌಡರ ಅವರನ್ನು ಈ ಬಾರಿ ಸಂಪುಟ ದರ್ಜೆ ಸಚಿವರನ್ನಾಗಿ ಮಾಡುವ ಮೂಲಕ ಚುನಾವಣಾ ಸಮಯದಲ್ಲಿ ಸಚಿವರನ್ನಾಗಿ ಮಾಡುವ ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದರಿಂದ ನಮ್ಮ ಮತಕ್ಷೇತ್ರದ ಜನ ನಿಮ್ಮ ಋಣಿಯಾಗಿತ್ತಾರೆ ಎಂದು ತಿಳಿಸಿದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌