ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಅವರು, ಕ್ರಿಕೆಟ್ ಪಂದ್ಯಾವಳಿಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಖ್ಯಾತಿ ಪಡೆದುಕೊಳ್ಳುತ್ತಿವೆ. ಆದರೆ, ಯುವಕರು ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಳ್ಳಬೇಕು, ಅದನ್ನು ಬಿಟ್ಟು ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಕೆಲವು ಯುವಕರು ಕ್ರೀಡೆಯ ಮೂಲಕ ಬೆಟ್ಟಿಂಗ್ ಕಟ್ಟಿ ಭವಿಷ್ಯವನ್ನು ನಾಶ ಮಾಡಿಕೊಳ್ಳುತ್ತಿದ್ದಾರೆ. ಯುವ ಸಮುದಾಯ ಬೆಟ್ಟಿಂಗ್ ದಂಧೆಯಿಂದ ದೂರ ಸರಿದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸಾಕಷ್ಟು ಉತ್ತಮ ಪರಿಣಾಮ ಬೀರಲಿದೆ. ಹಾಗಾಗಿ ಪ್ರತಿಯೊಬ್ಬ ಯುವಕರು ಕ್ರೀಡೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಸಮಾರಂಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಆರ್.ಸೋಮಶೇಖರ್, ಆಯೋಜಿಕರಾದ ನಿಪ್ಪು, ಹೇಮಂತ್, ಮೇಘರಾಜ್, ವರದ, ಮಂಜು, ನವೀನ್, ಬಾಬು, ಜೆಡಿಎಸ್ ಮುಖಂಡರಾದ ಬಿ.ಎಸ್.ಜಯರಾಮು, ಗುರು ಸೇರಿದಂತೆ ಹಲವರು ಹಾಜರಿದ್ದರು.