ಸಿ.ಟಿ. ರವಿ ಪ್ರಕರಣ: ರಾಜ್ಯ ಸರ್ಕಾರ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ

KannadaprabhaNewsNetwork |  
Published : Jul 27, 2026, 03:15 AM IST
ಸುನಿಲ್‌  | Kannada Prabha

ಸಾರಾಂಶ

ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ನೋಟಿಸ್ ನೀಡಲು ರಾಜ್ಯ ಪೊಲೀಸ್ ಇಲಾಖೆ ಕೈಗೊಂಡ ಕ್ರಮವನ್ನು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

ಕಾರ್ಕಳ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ನೋಟಿಸ್ ನೀಡಲು ರಾಜ್ಯ ಪೊಲೀಸ್ ಇಲಾಖೆ ಕೈಗೊಂಡ ಕ್ರಮವನ್ನು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಹೈಕೋರ್ಟ್ ಪೊಲೀಸರ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ಖಾಕಿ ಪಡೆ ಆಳುವ ಸರ್ಕಾರದ ಒತ್ತಡಕ್ಕೆ ಮಣಿದು ವಿರೋಧಿ ಧ್ವನಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಸಿ.ಟಿ. ರವಿ ವಿರುದ್ಧ ಯಾವುದೇ ದುರುದ್ದೇಶಪೂರಿತ ಕ್ರಮವನ್ನು ಸಹಿಸುವುದಿಲ್ಲ ಎಂದಿದ್ದಾರೆ.ಉಪಮುಖ್ಯಮಂತ್ರಿ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿರುವ ಸುನಿಲ್ ಕುಮಾರ್, ನಿಮಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸಿ.ಟಿ. ರವಿಯವರಿಗೂ ಇದೆ ಎಂದು ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಯ ನೈಜ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸದೆ, ರಾಜಕೀಯ ದ್ವೇಷದಿಂದ ಪ್ರತಿಪಕ್ಷದ ನಾಯಕರನ್ನು ಗುರಿಯಾಗಿಸಲಾಗುತ್ತಿದೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಸರ್ಕಾರದ ಪತನದ ದಿನಗಣನೆ ಆರಂಭವಾಗಿದ್ದು, ಸೂಕ್ತ ಸಮಯದಲ್ಲಿ ರಾಜಕೀಯವಾಗಿ ಉತ್ತರ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಬ್ಸಿಡಿ ದರದಲ್ಲಿ ಟ್ರ್ಯಾಕ್ಟರ್‌ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ
ಹಿಪ್ಪರಗಿಯಲ್ಲಿ ನಿಲ್ಲಿಸಿದ್ದ ಕಾರು ಸ್ಫೋಟ !