ಸಿ.ಟಿ.ರವಿ ಅವಹೇಳನಕಾರಿ ಪದ ಬಳಕೆ ಮಾಡಿಲ್ಲ: ಕುರುವಂಗಿ ವೆಂಕಟೇಶ್

KannadaprabhaNewsNetwork |  
Published : Jun 18, 2026, 01:15 AM IST
ದದದ | Kannada Prabha

ಸಾರಾಂಶ

ಚಿಕ್ಕಮಗಳೂರುವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಯಾವುದೇ ಅವಹೇಳನಕಾರಿ ಪದ ಬಳಕೆ ಮಾಡಿಲ್ಲ. ಹೀಗಿದ್ದರೂ ಕಾಂಗ್ರೆಸ್ ನಾಯಕರು ಸಿ.ಟಿ.ರವಿ ವಿರುದ್ಧ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಯಾವುದೇ ಅವಹೇಳನಕಾರಿ ಪದ ಬಳಕೆ ಮಾಡಿಲ್ಲ. ಹೀಗಿದ್ದರೂ ಕಾಂಗ್ರೆಸ್ ನಾಯಕರು ಸಿ.ಟಿ.ರವಿ ವಿರುದ್ಧ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಲ್ಲಿಕಾರ್ಜುನ ಖರ್ಗೆ ಅವರು ಗೃಹ ಸಚಿವರಾಗಿದ್ದಾಗಲೇ ಆರ್ ಎಸ್ ಎಸ್ ನಿಷೇಧಿಸಲು ಸಾಧ್ಯವಾಗಿಲ್ಲ. ಈಗ ಪ್ರಿಯಾಂಕ ಖರ್ಗೆ ಎಲ್ಲಿಂದ ನಿಷೇಧಿಸುತ್ತಾರೆ ಎಂಬ ಅರ್ಥದಲ್ಲಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಹೇಗೆ ಅವಹೇಳನಕಾರಿಯಾಗುತ್ತದೆ ಎಂದು ಪ್ರಶ್ನಿಸಿದರು.

ಆರ್ ಎಸ್ ಎಸ್ ಒಂದು ರಾಷ್ಟ್ರ ಭಕ್ತ, ಸಂಸ್ಕಾರವನ್ನು ಬಿತ್ತುವ, ದೇಶ ರಕ್ಷಣೆಗಾಗಿ ತ್ಯಾಗದ ಗುಣ ಬೆಳೆಸುವ ನಿಸ್ವಾರ್ಥ ಸೇವಾ ಸಂಸ್ಥೆ. ಅಂಬೇಡ್ಕರ್ ಅವರು ದೇಶಕ್ಕೆ ಕೊಟ್ಟಿರುವ ಸಂವಿಧಾನದ ಪ್ರಕಾರವೇ ಎಲ್ಲಾ ಸಂಘ ಸಂಸ್ಥೆಗಳು ನೋಂದಣಿ ಮಾಡಬೇಕು ಎಂದಿಲ್ಲ. ಸರ್ಕಾರ ಅಥವಾ ಯಾವುದೇ ಸಂಘ ಸಂಸ್ಥೆಗಳಿಂದ ದೇಣಿಗೆ ಪಡೆದುಕೊಳ್ಳುವ ಸಂಘ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಆದರೆ ಆರ್ ಎಸ್ ಎಸ್ ಯಾವುದೇ ಸರ್ಕಾರ ಅಥವಾ ಸಂಘ ಸಂಸ್ಥೆಗಳಿಂದ ದೇಣಿಗೆ ಪಡೆಯುವುದಿಲ್ಲ. ಬಗ್ಗೆ ಗೃಹ ಸಚಿವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲದಿರುವುದು ವಿಷಾದನೀಯ ಎಂದರು.

ಸಿ.ಟಿ.ರವಿ ಅವರು ಸ್ವಯಂಸೇವಕ ಸಂಘದಿಂದ ಸಂಸ್ಕಾರ ಕಲಿತಿದ್ದಾರೆ. ಎಲ್ಲಿ ಏನು ಮಾತನಾಡಬೇಕು? ಹೇಗೆ ವರ್ತಿಸಬೇಕು ಎಂಬ ಸಂಸ್ಕಾರ ಕರಗತ ಮಾಡಿಕೊಂಡಿದ್ದಾರೆ. ಅವರ ಜನಪ್ರಿಯತೆ ಸಹಿಸಿಕೊಳ್ಳಲಾರದೆ ಕಾಂಗ್ರೆಸ್ ನಾಯಕರು ಯಾರನ್ನೋ ಮೆಚ್ಚಿಸಬೇಕು ಎಂಬ ಉದ್ದೇಶದಿಂದ ಅರ್ಥಹೀನ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕೊಲ್ಲಾಬೋವಿ, ಭೀರಪ್ಪ, ಪ್ರದೀಪ್ ನಾಯ್ಕ, ವೈ.ಜಿ.ಸುರೇಶ್, ಕೇಶವಮೂರ್ತಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾಧಿಕಾರಿಗಳಿಂದ ರೈತರಿಂದ ಅರ್ಜಿಗಳ ಸ್ವೀಕಾರ
ಕಾಮಗಾರಿಗೆ ಶಾಸಕ ಸುರೇಶ್‌ಗೌಡ ಚಾಲನೆ