ಅಧಿಕಾರಿಗಳ ವಿರುದ್ಧ ಕ್ಯಾಬಿನೆಟ್‌ ಕ್ರಮ- ಏನೂ ಹೇಳೋದಿಲ್ಲ: ಬಿ.ಕೆ. ಹರಿಪ್ರಸಾದ್‌

KannadaprabhaNewsNetwork |  
Published : Jun 09, 2025, 01:14 AM IST
ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ | Kannada Prabha

ಸಾರಾಂಶ

, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾಡಿದ ಕಾರ್ಯಕ್ರಮ ಅದು. ಕರ್ನಾಟಕ ರಾಜ್ಯದಲ್ಲಿ ಕಾಲ್ತುಳಿತ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಗಿದೆ. ಪೊಲೀಸ್‌ ಕಮಿಷನರ್‌ ದಯಾನಂದ್ ಒಬ್ಬ ಬಹಳ ಪ್ರಮಾಣಿಕ ಮತ್ತು ಸ್ವಚ್ಛ ಕಮಿಷನರ್. ಭ್ರಷ್ಟಾಚಾರವನ್ನು ಮಟ್ಟಹಾಕಿದ ಅಧಿಕಾರಿ. ಅವರು ಪೊಲೀಸ್‌ ಇಲಾಖೆಯಲ್ಲಿ‌ ಬಹಳಷ್ಟು ಬದಲಾವಣೆ ತಂದಿದ್ದಾರೆ. ಬೆಂಗಳೂರಿನ ಘಟನೆಯಲ್ಲಿ ಏನಾಗಿತ್ತು ಎನ್ನುವುದು ಗೊತ್ತಿಲ್ಲ. ಆದರೆ ಕ್ಯಾಬಿನೆಟ್ ನಿರ್ಧಾರವಾದ ಕಾರಣ ನಾನು ಮಾತನಾಡುವುದಿಲ್ಲ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತದ ಕುರಿತು ಸರ್ಕಾರದ ಕ್ರಮದ ಬಗ್ಗೆ ನಾನು ಟೀಕೆ ಟಿಪ್ಪಣಿ ಮಾಡುವುದಿಲ್ಲ. ಆ ಘಟನೆ ಆಗಬಾರದ್ದು ಆಗಿದೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ಯಾಬಿನೆಟ್ ನಿರ್ಧಾರ ಕೈಗೊಂಡಿದೆ. ಅದರ ಬಗ್ಗೆ ನಾನು ಏನೂ ಹೇಳುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾಡಿದ ಕಾರ್ಯಕ್ರಮ ಅದು. ಕರ್ನಾಟಕ ರಾಜ್ಯದಲ್ಲಿ ಕಾಲ್ತುಳಿತ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಗಿದೆ. ಪೊಲೀಸ್‌ ಕಮಿಷನರ್‌ ದಯಾನಂದ್ ಒಬ್ಬ ಬಹಳ ಪ್ರಮಾಣಿಕ ಮತ್ತು ಸ್ವಚ್ಛ ಕಮಿಷನರ್. ಭ್ರಷ್ಟಾಚಾರವನ್ನು ಮಟ್ಟಹಾಕಿದ ಅಧಿಕಾರಿ. ಅವರು ಪೊಲೀಸ್‌ ಇಲಾಖೆಯಲ್ಲಿ‌ ಬಹಳಷ್ಟು ಬದಲಾವಣೆ ತಂದಿದ್ದಾರೆ. ಬೆಂಗಳೂರಿನ ಘಟನೆಯಲ್ಲಿ ಏನಾಗಿತ್ತು ಎನ್ನುವುದು ಗೊತ್ತಿಲ್ಲ. ಆದರೆ ಕ್ಯಾಬಿನೆಟ್ ನಿರ್ಧಾರವಾದ ಕಾರಣ ನಾನು ಮಾತನಾಡುವುದಿಲ್ಲ ಎಂದು ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಸೌಹಾರ್ದ ವಾತಾವರಣ ನಿರ್ಮಾಣ ಕುರಿತಂತೆ ಪ್ರತಿಕ್ರಿಯಿಸಿದ ಬಿ.ಕೆ.ಹರಿಪ್ರಸಾದ್‌, ಜಿಲ್ಲೆಯ ಸಮಾನ ಮನಸ್ಕರ ಜೊತೆ ಮಾತನಾಡಿದ್ದೇನೆ. ನಾವೆಲ್ಲರೂ ಸೇರಿ ಜಿಲ್ಲೆಯಲ್ಲಿ ಸೌಹಾರ್ದತೆ ನಿರ್ಮಾಣದ ಪ್ರಯತ್ನ ಮಾಡುತ್ತೇವೆ. ದ.ಕ ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಒಟ್ಟಾಗಿ ಪ್ರಯತ್ನಿಸುತ್ತೇವೆ. ವೈದ್ಯರು, ಬರಹಗಾರರು, ಚಿಂತಕರ ಜೊತೆ ಮಾತನಾಡಿದ್ದೇನೆ. ಮುಂದಿನ ಹೆಜ್ಜೆಗಳು ಏನು ಎಂಬ ಬಗ್ಗೆ ಬಹಳ ಚರ್ಚೆ ಆಗಿದೆ ಎಂದರು. ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಕೋಮು ಧ್ರುವೀಕರಣದಿಂದ ಘಟನೆಗಳು ನಡೆಯುತ್ತಿರುತ್ತಿವೆ. ಇಲ್ಲಿ ನಡೆದ ಘಟನೆಗಳು ವೈಯಕ್ತಿಕ ದ್ವೇಷದಿಂದ ಅಗಿದೆ ಎನ್ನುವುದನ್ನು ನಾನು ಒಪ್ಪುವುದಿಲ್ಲ. ಕೆಪಿಸಿಸಿ ನಿಯೋಗ ಅವರದ್ದೇ ಮಾಹಿತಿ ಪಡೆದು ಹೇಳಿಕೆ ಕೊಟ್ಟಿರಬಹುದು. ಅದಕ್ಕೂ ನನಗೂ ಸಂಬಂಧ ಇಲ್ಲ, ನನ್ನ ಮಾಹಿತಿ ಮುಖ್ಯಮಂತ್ರಿಗಳಿಗೆ ಕೊಡುತ್ತೇನೆ. ನಾನು ಪರಿಷತ್ ಸದಸ್ಯನಾಗಿ ಸಿಎಂ ಜೊತೆ ಮಾತನಾಡಿ ಇಲ್ಲಿಗೆ ಬಂದಿದ್ದೇನೆ. ಯಾವುದೇ ಧರ್ಮ, ಜಾತಿಯವರಾದರೂ ದ್ವೇಷ ಭಾಷಣ ಸರಿಯಲ್ಲ. ಸುಪ್ರೀಂ ಕೋರ್ಟ್ ಕೂಡ ದ್ವೇಷ ಭಾಷಣ ಮಾಡುವವರ ಮೇಲೆ ಸ್ವಯಂ ಪ್ರೇರಿತ ಎಫ್ಐಆರ್ ದಾಖಲಿಸಲು ಹೇಳಿದೆ. ಕಾರ್ಯಾಂಗ ಮತ್ತು ನ್ಯಾಯಾಂಗ ಸಹಕಾರ ಇರಲಿಲ್ಲ ಅಂದರೆ ರಾಜ್ಯದಲ್ಲಿ ಶಾಂತಿ ನೆಲೆಸುವುದು ಕಷ್ಟ ಎಂದು ಅವರು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ : ಸಿಎಂ ಸಿದ್ದರಾಮಯ್ಯ
ಸಿಎಂ ರೇಸಲ್ಲಿ ಡಿಕೆ ಒಬ್ಬರೇ ಇಲ್ಲ : ರಾಜಣ್ಣ