ಎಲ್ಲ ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಹಾವೇರಿ: ಎಲ್ಲ ಹಿರಿಯ ಶಾಸಕರು ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ಮೇ 20ರೊಳಗೆ ಸಚಿವ ಸಂಪುಟ ವಿಸ್ತರಣೆಯಾಗುವ ವಿಶ್ವಾಸವಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಎಲ್ಲರೂ ಆಪ್ತರು. ಅವರು ತಮ್ಮ ಮಂತ್ರಿ ಮಂಡಲದ ಸಭೆ ಮತ್ತು ಶಾಸಕರ ಸಭೆ ಮಾಡುತ್ತಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.
ಮೇ 4ಕ್ಕೆ ಉಪಚುನಾವಣೆ ಫಲಿತಾಂಶ ಬರುತ್ತದೆ. ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಗೆದ್ದು ವಿಜಯೋತ್ಸವ ಮಾಡುತ್ತೇವೆ ಎಂದ ಅವರು, ದಾವಣಗೆರೆ ಉಪಚುನಾವಣೆ ಅಲ್ಪಸಂಖ್ಯಾತರ ಮುಖಂಡರ ರಾಜೀನಾಮೆ ಪಡೆದ ವಿಚಾರ ಎಐಸಿಸಿ ಕಾರ್ಯದರ್ಶಿ ಸುರ್ಜೇವಾಲಾ ನೋಡುತ್ತಾರೆ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.