ಸಂಪುಟ ವಿಸ್ತರಣೆ : ಸಚಿವ ಜಮೀರ್‌ ಕೊಟ್ರು ಹೊಸ ಸುಳಿವು

KannadaprabhaNewsNetwork |  
Published : Sep 30, 2025, 01:00 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊರವಲಯದ ವಿಜಯನಗರ ಶ್ರೀಕೃಷ್ಣದೇವರಾಯ ಬಳಿಯ ಜಾಗವನ್ನು ಜಿಲ್ಲಾ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸೋಮವಾರ ವೀಕ್ಷಿಸಿದರು. ಶಾಸಕ ಬಿ.ನಾಗೇಂದ್ರ ಮತ್ತಿತರರಿದ್ದರು.  | Kannada Prabha

ಸಾರಾಂಶ

‘ನವೆಂಬರ್‌ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ  ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ಸಚಿವ ಜಮೀರ್ ಅಹ್ಮದ್  ತಿಳಿಸಿದ್ದಾರೆ.

 ಬಳ್ಳಾರಿ :  ‘ನವೆಂಬರ್‌ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಬಳ್ಳಾರಿಯವರೇ ಆಗಿರುವ ಬಿ.ನಾಗೇಂದ್ರ ಅವರು ಮತ್ತೆ ಸಂಪುಟ ಸೇರಲಿದ್ದು, ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ. ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ’ ಎಂದು ವಸತಿ, ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಶಾಸಕ ನಾಗೇಂದ್ರ ಅವರು ಬಳ್ಳಾರಿಯವರಾಗಿದ್ದು, ಈ ಭಾಗದ ಸಮಸ್ಯೆಗಳ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇದೆ. ಅವರು ಬಳ್ಳಾರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಹೊತ್ತಿದ್ದಾರೆ. ನಾಗೇಂದ್ರ ಅವರ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ್ದು, ಬಹುಶಃ ಇನ್ನು 15 ದಿನಗಳಲ್ಲಿ ಅವರಿಗೆ ಸಚಿವರಾಗುವ ಯೋಗ ಕೂಡಿ ಬರಲಿದೆ ಎಂದು ತಿಳಿಸಿದರು.

ಇದೇ ವೇಳೆ, ಸಿಎಂ ಬದಲಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲ. ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ