Calf falls prey to leopard attack; villagers alarmed.
ರಿಪ್ಪನ್‍ಪೇಟೆ: ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆ ಎಂಬಲ್ಲಿ ಚಿರತೆ ದಾಳಿಗೆ ಎರಡು ವರ್ಷದ ಕರು ಮೃತಪಟ್ಟಿರುವ ಘಟನೆ ನಡೆದಿದೆ.
ಹಿಂಡ್ಲೆಮನೆಯ ಶ್ರೀಮತಿ ಅವರಿಗೆ ಸೇರಿದ ಕರುವನ್ನು ಶನಿವಾರ ಎಂದಿನಂತೆ ಮೇಯಲು ಬಿಟ್ಟಿದ್ದ ವೇಳೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಕರುವಿನ ಗಂಟಲಿನ ಭಾಗಕ್ಕೆ ಚಿರತೆ ಗಂಭೀರ ಗಾಯಗೊಳಿಸಿದೆ.
ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಕರು ಹೇಗೂ ಮನೆಕಡೆಗೆ ಮರಳಿದೆ. ಆದರೆ. ಗಂಟಲಿನ ಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ ಕಲವೇ ಸಮಯದಲ್ಲಿ ಚಿರತೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಹಿಂಡ್ಲೆಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಇದೀಗ ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಜನ ಹಾಗೂ ಜಾನುವಾರುಗಳ ಸುರಕ್ಷತೆ ದೃಷ್ಠಿಯಿಂದ ಅರಣ್ಯ ಇಲಾಖೆ ಕೊಡಲೇ ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಚಲನವಲನದ ಬಗ್ಗೆ ಪರಿಶೀಲನೆ ನಡೆಸಬೇಕು. ಚಿರತೆಯನ್ನು ಸರೆಹಿಡಿಯುವ ಮೂಲಕ ಗ್ರಾಮಸ್ಥರ ಭಯವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.