ತುರ್ತು ಸ್ಪಂದನ ವ್ಯವಸ್ಥೆಗೆ 112ಕ್ಕೆ ಕರೆ ಮಾಡಿ : ಮಂಗಳೂರು ಪೊಲೀಸ್‌ ಮಾಹಿತಿ

KannadaprabhaNewsNetwork |  
Published : Jun 14, 2025, 02:03 AM ISTUpdated : Jun 14, 2025, 11:37 AM IST
32 | Kannada Prabha

ಸಾರಾಂಶ

ಮಂಗಳೂರು ನಗರ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎಲ್ಲ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ, ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವ ಮೊದಲು ಡಯಲ್ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

 ಮಂಗಳೂರು : ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು ‘ಒಂದೇ ಭಾರತ ಒಂದೇ ತುರ್ತು ಕರೆ-112’ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಅದುವೇ ‘ತುರ್ತು ಸ್ಪಂದನ ವ್ಯವಸ್ಥೆ-112’. ನಗರದ ಜನರು ತುರ್ತು ಸಂದರ್ಭಗಳಲ್ಲಿ ಪೊಲೀಸ್, ಅಗ್ನಿ ಶಾಮಕ, ವಿಪತ್ತು ಬೇರೆ ಬೇರೆ ಸಹಾಯವಾಣಿಗೆ ಕರೆಮಾಡುವ ಅಗತ್ಯವಿಲ್ಲ. ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು, ಎಲ್ಲ ಸಮಸ್ಯೆಗಳಿಗೂ ತುರ್ತು ಸೇವೆ ಸಾರ್ವಜನಿಕರಿಗೆ ಲಭಿಸಲಿದೆ.

ಮಂಗಳೂರು ನಗರ ಪೋಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಸರಗಳ್ಳತನ, ಜಗಳ, ಮಹಿಳಾ, ಮಕ್ಕಳ, ಹಿರಿಯ ನಾಗರಿಕರ, ಸಂಶಯವಿರುವ ವಾಹನ ಅಥವಾ ವ್ಯಕ್ತಿಗಳು ಇದ್ದಲ್ಲಿ ಹಾಗೂ ಇನ್ನಿತರ ಎಲ್ಲ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ, ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವ ಮೊದಲು ಡಯಲ್ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಈ ವ್ಯವಸ್ಥೆಯಲ್ಲಿ ನಿಮ್ಮ ಕರೆಯನ್ನು ಮೊದಲ ಆದ್ಯತೆ ಪರಿಗಣಿಸಿ ಹತ್ತಿರವಿರುವ ಪೊಲೀಸ್ ವಾಹನವನ್ನು ನೀವು ಇರುವ ಸ್ಥಳಕ್ಕೆ ಕಳುಹಿಸಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿದೆ.

ಪೊಲೀಸ್ ನೆರವು / ಅಗ್ನಿ ಶಾಮಕ ದಳದ ನೆರವು / ವಿಪತ್ತು ನೆರವು ಸೇರಿದಂತೆ ಯಾವುದೇ ತುರ್ತು ಸಂಧರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಎಮೆರ್ಜೆನ್ಸಿ ರೆಸ್ಪಾಂನ್ಸ್ ಸಪೋರ್ಟ್ ಸಿಸ್ಟಮ್ (ERSS) ವ್ಯವಸ್ಥೆಯಡಿ ನಗರದ ಎಲ್ಲಿಂದಲೇ ಕರೆ ಬಂದರು ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ.

ಸಾರ್ವಜನಿಕ ತುರ್ತು ಸ್ಪಂದನಾ ಸಹಾಯ ವ್ಯವಸ್ಥೆಗಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 28 ಪೆಟ್ರೋಲಿಂಗ್ ವಾಹನಗಳನ್ನು ಈ ಕರ್ತವ್ಯಕ್ಕೆ ಬಳಸಲಾಗುತ್ತಿದ್ದು, ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಿದೆ. ಇದರಲ್ಲಿ 21 ಹೊಯ್ಸಳ ಮತ್ತು 07 ಹೈವೇ ಪೆಟ್ರೋಲ್ ವಾಹನಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಈ ವ್ಯವಸ್ಥೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Read more Articles on

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ