ಸಂಚಾರಿ ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ

KannadaprabhaNewsNetwork |  
Published : Jan 12, 2024, 01:46 AM IST
ಸಂಚಾರಿ ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್‌ ಅವರು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರಿನಲ್ಲಿ ಇತ್ತೀಚಿಗೆ ನಗರ ವಾಸಿಗಳು ಸಂಚಾರಿ ನಿಯಮಗಳನ್ನು ಪಾಲಿಸದೆ ತಮ್ಮ ಇಷ್ಟ ಬಂದಂತೆ ನಡೆದು ಕೊಳ್ಳುತ್ತಿದ್ದಾರೆ, ಇದನ್ನು ತಡೆಯಲು ಸಂಚಾರಿ ಪೊಲೀಸರು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್‌, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

- ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಮನವಿ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಇತ್ತೀಚಿಗೆ ನಗರ ವಾಸಿಗಳು ಸಂಚಾರಿ ನಿಯಮಗಳನ್ನು ಪಾಲಿಸದೆ ತಮ್ಮ ಇಷ್ಟ ಬಂದಂತೆ ನಡೆದು ಕೊಳ್ಳುತ್ತಿದ್ದಾರೆ, ಇದನ್ನು ತಡೆಯಲು ಸಂಚಾರಿ ಪೊಲೀಸರು ವಿಫಲರಾಗಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್‌ ಹೇಳಿದ್ದಾರೆ.

ಈ ಸಂಬಂಧ ಗುರುವಾರ ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ವಾಹನಗಳು ಇದ್ದಂತಹ ಸ್ಥಳಗಳಲ್ಲಿಯೇ ನಿಲುಗಡೆ ಮಾಡಬೇಕೆಂದು ನಿಯಮವಿದ್ದರೂ ಸಾರ್ವಜನಿಕರು ಮನ ಬಂದಂತೆ ತಮ್ಮ ವಾಹನ ನಿಲುಗಡೆ ಮಾಡುತ್ತಿದ್ದಾರೆ ಎಂದರು.

ಶಾಲಾ, ಕಾಲೇಜುಗಳ ಎದುರು ಕೆಲವು ಯುವಕರು ಬೈಕ್‌ಗಳಲ್ಲಿ ಸದ್ದು ಬರುವ ಹಾರನ್‌ ಹಾಕಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಿರಿಕಿರಿ ಆಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಆಟೋ ಚಾಲಕರು ಸಮವಸ್ತ್ರ ಧರಿಸುತ್ತಿಲ್ಲ. ಅಪ್ರಾಪ್ತ ಬಾಲಕರು ಆಟೋ ಚಾಲನೆ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಪೊಲೀಸ್‌ ಇಲಾಖೆ ಜಾಗೃತವಾಗಿರಬೇಕು ಎಂದು ಹೇಳಿದರು.

ಟಿಪ್ಪರ್, ಟಿಂಬರ್ ಲಾರಿಗಳು, ಟ್ರ್ಯಾಕ್ಟರ್‌ ಟ್ರೈಲರ್ ಗಳು ಏರು ಧ್ವನಿಯಲ್ಲಿ ಹಾರನ್ ಮಾಡುತ್ತಾ ನಗರ ಪ್ರದೇಶದಲ್ಲಿ ಸಂಚರಿಸುತ್ತಿವೆ. ಸರಕು ಸಾಗಾಣಿಕೆ ವಾಹನಗಳು, ಮ್ಯಾಕ್ಸಿ ಕ್ಯಾಬ್ ಬಸ್ಸು ಹಾಗೂ ಅತಿ ಹೆಚ್ಚು ಭಾರ ಹೊಯ್ಯುವ ವಾಹನಗಳ ತಪಾಸಣೆ ಮಾಡದೇ ಆರ್‌ಟಿಓ ಉದಾಸೀನತೆ ತೋರುತ್ತಿದೆ ಎಂದ ಅವರು, ಈ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಈಶ್ವರ್‌, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್‌, ತಾಲೂಕು ಅಧ್ಯಕ್ಷ ಶರತ್‌ ಕುಮಾರ್‌, ಆಟೋ ಘಟಕ ಅಧ್ಯಕ್ಷ ಸುನೀಲ್‌ ಕುಮಾರ್‌ ಉಪಸ್ಥಿತರಿದ್ದರು. 11 ಕೆಸಿಕೆಎಂ 1

ಸಂಚಾರಿ ನಿಯಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಜಿಲ್ಲಾಧ್ಯಕ್ಷ ನೂರುಲ್ಲಾ ಖಾನ್‌ ಅವರು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ