ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ 2022 ಮತ್ತು 2023 ನೇ ವರ್ಷದ ‘ಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿಗಳನ್ನು ಸ್ವತಃ ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ ಮಾಡಿ ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಹರಾಗಿರುವವರ ಕುರಿತಾಗಿ ಹೆಚ್ಚಿನ ಅಥವಾ ವಿಶೇಷ ಮಾಹಿತಿ ಇದ್ದಲ್ಲಿ ಅಕಾಡೆಮಿಗೆ ಒದಗಿಸಬಹುದು.
ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಜೊತೆ ಎಲ್ಲಾ ಮಾಹಿತಿಯನ್ನು ಅಕಾಡೆಮಿಯ ನಿಗದಿತ ಅರ್ಜಿ ನಮೂನೆಯಲ್ಲಿಯೇ ಕಳುಹಿಸಬೇಕು. ಇದಕ್ಕೆ ಸಂಬಂಧಿಸಿ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಯೊಂದಿಗೆ ಅ.10 ರೊಳಗೆ ತಲುಪುವಂತೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು.ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ಗೌರವ ಪ್ರಶಸ್ತಿ 2022 ಮತ್ತು 2023 ಯೋಜನೆ’ ಎಂದು ಬರೆದು ಅರ್ಜಿ ವಿವರಗಳನ್ನು ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ – 571 201 ಈ ವಿಳಾಸಕ್ಕೆ ಕಳುಹಿಸಿಕೊಡುವುದು.