ಜೆಜೆಎಂ ಯೋಜನೆ ಸದುಪಯೋಗಕ್ಕೆ ಕರೆ

KannadaprabhaNewsNetwork |  
Published : Dec 22, 2023, 01:30 AM IST
ಜೆಜೆಎಂ ಯೋಜನೆ ಸದುಪಯೋಗಕ್ಕೆ ಶಾಸಕ ರಾಜುಗೌಡ ಕರೆ. | Kannada Prabha

ಸಾರಾಂಶ

ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಅವರು ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದ್ದಾರೆ. ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ನೀರಿನ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಅವರು ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ ‘ಜಲ ಜೀವನ್ ಮಿಷನ್’ ಆರಂಭಿಸಿದ್ದಾರೆ. ಯೋಜನೆಯ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.

ತಾಲೂಕಿನ ಯಲಗೋಡ ತಾಂಡಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ವಿಜಯಪುರ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪವಿಭಾಗ ಸಿಂದಗಿ ವತಿಯಿಂದ 2022-23ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಗ್ರಾಮದ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಸುಮಾರು ₹32.10 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಭವಿಷ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗದಿರಲಿ ಎಂದು ಈ ಯೋಜನೆಯನ್ನು ನಿಮ್ಮ ಗ್ರಾಮದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರತಿಯೊಂದು ಗ್ರಾಮದಲ್ಲಿರುವ ಮನೆ ಮನೆಗೆ ನೀರು ತಲುಪಬೇಕು. ಗುತ್ತಿಗೆದಾರರು ಉತ್ತಮವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಕ್ಷೇತ್ರದ ಹಲವು ಗ್ರಾಮಗಳ ರಸ್ತೆ, ಶಾಲಾ ಕಟ್ಟಡ, ಚರಂಡಿ ಸೇರಿದಂತೆ ಇತರೆ ಹಲವು ಮೂಲಭೂತ ಸಮಸ್ಯೆಗಳಿದ್ದು, ಹಂತ ಹಂತವಾಗಿ ಬಗೆಹರಿಸಲಾಗುವುದು. ಗ್ರಾಮಸ್ಥರು ಒಗ್ಗಟ್ಟಿನಿಂದ ಬಂದು ಯಾವ ಕೆಲಸವಾಗಬೇಕು ಎಂಬುವುದನ್ನು ತಿಳಿಸಬೇಕು. ಎಲ್ಲರೂ ಸಹಕಾರ ನೀಡಿದರೆ ಪ್ರತಿಯೊಂದು ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಸಂದರ್ಭದಲ್ಲಿ ಗ್ರಾಮಕ್ಕೆ ಭೂಮಿ ಪೂಜೆ ನೆರವೇರಿಸಲು ಬಂದ ಶಾಸಕರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಜೆಡಿಎಸ್ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಸಾಯಿಬಣ್ಣ ಬಾಗೇವಾಡಿ, ಜಿಲ್ಲಾ ಉಪಾಧ್ಯಕ್ಷ ಮಶಾಕಸಾಬ್ ಚೌದ್ರಿ, ಮುಖಂಡರಾದ ಉಮೇಶ ಇಂಗಳಗಿ,ಮೆಗು ರಾಠೋಡ, ಗುತ್ತಿಗೆದಾರರಾದ ಬಸವರಾಜ ರಾಠೋಡ ಸೇರಿದಂತೆ ಗ್ರಾಮದ ಪ್ರಮುಖರು, ಗಣ್ಯರು, ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.

--

ಫೋಟೋ ೨೧ಡಿಎಚಪಿ೨

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ