ಆರೋಗ್ಯ ಸಂಜೀವಿನಿ ಯೋಜನೆ ಸದ್ಬಳಕೆಗೆ ಕರೆ

KannadaprabhaNewsNetwork |  
Published : Oct 05, 2025, 01:01 AM IST
ಫೋಟೋ-ಮಲ್ಲೇಶ ಕರಿಗಾರ | Kannada Prabha

ಸಾರಾಂಶ

ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ತಿಳಿಸಿದ್ದಾರೆ.

ಹಾವೇರಿ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ತಿಳಿಸಿದ್ದಾರೆ.ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.೧ರಿಂದಲೇ ಜಾರಿಗೊಳಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡಬೇಕು. ರಾಜ್ಯ ಸರ್ಕಾರದ ಅಧಿಕಾರಿ ಅಥವಾ ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯದ ಮಿತಿಯನ್ನು ೧೭ ಸಾವಿರ ರು.ಗಳಿಂದ ೨೭ ಸಾವಿರ ರು.ಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ.೧೮ರೊಳಗೆ ಸಂಬಂಧಿಸಿದ ಡಿ.ಡಿ.ಓ ಗಳಿಗೆ ನೀಡಬೇಕು. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಈ ತಿಂಗಳಿನಿಂದ ನೀಡಬೇಕು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೫.೨೫ ಲಕ್ಷ ಸರ್ಕಾರಿ ನೌಕರರು ಹಾಗೂ ೨೫ ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು ಎಚ್‌ಆರ್‌ಎಂಎಸ್-೧ರಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಲಾಭವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಪಡೆದುಕೊಳ್ಳಬೇಕು. ಯೋಜನೆ ಜಾರಿಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಕೃತಜ್ಞತೆ ತಿಳಿಸುತ್ತೇವೆ ಎಂದು ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ