ಹುಣಸಗಿಯಲ್ಲೂ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆ

KannadaprabhaNewsNetwork |  
Published : Sep 24, 2024, 01:53 AM IST
ಹುಣಸಗಿ ಪಟ್ಟಣದಲ್ಲಿ ವಿವಿಧೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟ ರಾಜ್ಯ ಗ್ರಾಮ ಆಡಳಿತಾಧಿಕಾರಿ ತಾಲೂಕು ಘಟಕ ಹುಣಸಗಿ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

Call for strike demanding fulfillment of demand in Hunsagi too

- ಮೊಬೈಲ್, ವೆಬ್ ತಂತ್ರಾಂಶದಲ್ಲಿ ಕರ್ತವ್ಯ ನಿರ್ವಹಿಸಲು ಒತ್ತಡ ಸ್ಥಗಿತಗೊಳಿಸುವಂತೆ ಮನವಿ

----

ಕನ್ನಡಪ್ರಭ ವಾರ್ತೆ ಹುಣಸಗಿ

ಕಂದಾಯ ಇಲಾಖೆಯಿಂದ ಅಭಿವೃದ್ಧಿ ಪಡಿಸಿರುವ 17ಕ್ಕೂ ಹೆಚ್ಚು ತಂತ್ರಾಂಶಗಳ ನಿರ್ವಹಣೆಗೆ ಒತ್ತಡ ಹಾಕುತ್ತಿರುವುದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕರ್ನಾಟ ರಾಜ್ಯ ಗ್ರಾಮ ಆಡಳಿತಾಧಿಕಾರಿ ತಾಲೂಕು ಘಟಕ ಹುಣಸಗಿ ವತಿಯಿಂದ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಲಾಯಿತು.

ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷ ಹಸನಸಾಬ ಡಿ. ಮುಲ್ಲಾ ಮಾತನಾಡಿ, ಮೊಬೈಲ್, ವೆಬ್ ತಂತ್ರಾಂಶ ‌ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್‌ಟಾಪ್, ಇಂಟರ್‌ನೆಟ್ ವ್ಯವಸ್ಥೆ ಸ್ಕ್ಯಾನರಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ಮಾನಸಿಕ ಹಾಗೂ ದೈಹಿಕ ಸಮಸ್ಯೆ ಎದುರಿಸಬೇಕಾಗಿದೆ ಎಂದು ವಿವರಿಸಿದರು.

ಮೊಬೈಲ್ ಆಪ್, ವೆಬ್ ಅಪ್ಲಿಕೇಶನ್, ಲೇಖನಿ ಸ್ಥಗಿತಗೊಳಿಸುವ ಮೂಲಕ ಉತ್ತಮ ಹಾಗೂ ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕರ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಕಂದಾಯ ಇಲಾಖೆಯಲ್ಲಿ 3 ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿ ರಚಿಸುವುದು. ಆಯುಕ್ತಾಲಯದಡಿ ಗ್ರಾಮ ಅಧಿಕಾರಿಗಳು ಶ್ರೇಷ್ಠತೆಯನ್ನು ರಾಜ್ಯ ಮಟ್ಟದ ಶ್ರೇಷ್ಠತೆಯನ್ನಾಗಿ ಪರಿಗಣಿಸುವುದು, ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿದರು.

ಬಸವರಾಜ ವಾಲಿಕಾರ್, ಭಾಗಣ್ಣ ಪೂಜಾರಿ, ಶಿವಶಂಕರ, ಶ್ರೀಶೈಲ್ ನಾಯಕ, ಬಾಲಪ್ಪ ದೊಡ್ಡಮನಿ, ಸಂತೋಷ್ ಕುಮಾರ, ಬಸವರಾಜ ಪೀರಾಪೂರ, ತಿಪ್ಪಣ್ಣ, ದೀಪ್ತಿ ಚಕ್ರವರ್ತಿ, ಚೆನ್ನಮ್ಮ ಧರೇಶ ಇದ್ದರು.

-

23ವೈಡಿಆರ್16: ಹುಣಸಗಿ ವಿವಿಧೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತಾಧಿಕಾರಿ ತಾಲೂಕು ಘಟಕ ಹುಣಸಗಿ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!