-ಭದ್ರಾವತಿ ಪ್ರೌಢಶಾಲೆ ವಿಭಾಗದಲ್ಲಿ ಮಕ್ಕಳ ದಿನಾಚರಣೆ ಕನ್ನಡಪ್ರಭ ವಾರ್ತೆ ಭದ್ರಾವತಿ
ಅವರು ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಆಶ್ರಿತ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಕ್ಕಳ ಹಕ್ಕುಗಳು, ಬಾಲ್ಯವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಹೆಣ್ಣುಮಕ್ಕಳ ಶಿಕ್ಷಣ, ಮಕ್ಕಳ ಸುರಕ್ಷತೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.ಪ್ರಭಾರ ಉಪ ಪ್ರಾಂಶುಪಾಲರಾದ ಎಂ.ಇ ಸೀಮಾ ಮಕ್ಕಳ ದಿನಾಚರಣೆ ಮಹತ್ವ, ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ವಿಶೇಷತೆ ಹಾಗೂ ಮಕ್ಕಳ ಮೇಲಿನ ಪ್ರೀತಿ, ಕಾಳಜಿ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
ಶಿಕ್ಷಕರಾದ ಶಪಿನಾಜ್ ಬಾನು, ಕೋಟೇಶ್ವರಿ, ಎನ್. ಮಂಜುಳಾ, ಜಯಲಕ್ಷ್ಮಿ, ಎನ್ ಜಿ ನೂರ್ ಫಾತಿಮಾ ಫಾರ್ನಾಜ್, ಅಶ್ವಿನಿ, ಹಪ್ತಾಜ್ ಅಹಮದ್, ಮೆಹಬೂಬ್ ಆಲಿಖಾನ್ ಹಾಗೂ ಸಿಬ್ಬಂದಿ ವರ್ಗದವರು, ಆಶ್ರಿತ ಸಂಸ್ಥೆಯ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಫೋಟೊ:ಡಿ17-ಬಿಡಿವಿಟಿ1 ಮತ್ತು 1(ಎ)