ಬೂದಗುಂಪಾ ಗ್ರಾಪಂ ವತಿಯಿಂದ ಯಶಸ್ವಿ ಗ್ರಾಮಸಭೆ
ಮನರೇಗಾ ಯೋಜನೆಯಡಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸದುಪಯೋಗ ಪಡೆಯಲು ಗ್ರಾಮಸ್ಥರಿಗೆ ಬೂದಗುಂಪಾ ಪಿಡಿಒ ವೆಂಕಟೇಶ್ ನಾಯಕ ಹೇಳಿದರು.
ತಾಲೂಕಿನ ಬೂದಗುಂಪಾ ಗ್ರಾಪಂನಲ್ಲಿ 2025-26ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕ್ರಿಯಾ ಯೋಜನೆ ತಯಾರಿಸಲು ಹಮ್ಮಿಕೊಂಡಿದ್ದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮದ ಜನರು ನರೇಗಾ ಯೋಜನೆಯ ಮೂಲಕ ಹಲವಾರು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಳ್ಳಬಹುದು. ನರೇಗಾದಡಿ ಅರ್ಹ ಕುಟುಂಬಗಳಿಗೆ ವರ್ಷದಲ್ಲಿ 100 ದಿನ ಕೆಲಸ ಒದಗಿಸಲಾಗಿದ್ದು, ಪ್ರತಿ ದಿನಕ್ಕೆ ₹349 ಕೂಲಿ ಪಾವತಿಸಲಾಗುತ್ತಿದೆ. ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಯೋಜನೆಯಡಿ ಕ್ಯೂಆರ್ ಕೋಡ್ ಬಳಸಿ ಸಲ್ಲಿಸಿದ ಬೇಡಿಕೆಗಳ ಕಾಮಗಾರಿಗಳ ಪರಿಶೀಲನೆ ಮಾಡಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು.ಗ್ರಾಮಸಭೆ ನೋಡಲ್ ಅಧಿಕಾರಿಗಳು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ವಿನಾಯಕ ಮುತ್ತು ಅವರು ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನ ಮಾಡಿಕೊಳ್ಳುವ ನರೇಗಾ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು.
ಬಳಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸಭೆಯಲ್ಲಿ 3 ಗ್ರಾಮಗಳಿಂದ ಮನೆ ಮನೆ ಭೇಟಿ ಹಾಗೂ ವಾರ್ಡ್‌ಸಭೆಯಲ್ಲಿ ಬಂದ ಬೇಡಿಕೆಯ ಅರ್ಜಿಗಳನ್ನು ಓದಿ ಹೇಳಲಾಯಿತು.