ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಯಲ್ಲಿ ಕೆ.ಬಿ.ಪ್ರಸನ್ನಕುಮಾರ್
ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ದೊರೆಯುವ ಸೌಲಭ್ಯವನ್ನು ಬ್ರಾಹ್ಮಣರು ಉಪಯೋಗಿಸಿಕೊಳ್ಳಬೇಕೆಂದು ಶಿವಮೊಗ್ಗ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಹೇಳಿದ್ದಾರೆ.
ಶುಕ್ರವಾರ ಬ್ರಾಹ್ಮಣ ಸೇವಾ ಸಮಿತಿಯಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ 132ನೇ ರಥೋತ್ಸವ ಅಂಗವಾಗಿ ಪಟ್ಟಣದ ಅನ್ನಪೂರ್ಣ ಭವನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬ್ರಾಹ್ಮಣ ಅಭಿವೃದ್ಧಿ ನಿಗಮದಿಂದ ದೊರಕುವ ಕೈಗಾರಿಕೆ, ವಿದ್ಯಾರ್ಥಿ ವೇತನ ಇತ್ಯಾದಿ ವಿವಿಧ ಸೌಲಭ್ಯ ಪಡೆದುಕೊಳ್ಳಬೇಕು. ರಥೋತ್ಸವ ಕಾರ್ಯಕ್ರಮಗಳಲ್ಲಿ ನಿಮ್ಮೆಲ್ಲರ ಸಡಗರ ನೋಡಿದರೆ ಸಂತೋಷವಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಚಾರತ್ರಯರ ಭವನಗಳು ನಿರ್ಮಾಣವಾಗಬೇಕು ಎಂಬುದು ತಮ್ಮ ಆಶಯ ಎಂದು ಹೇಳಿದರು.ಬೆಂಗಳೂರು ಕೈಗಾರಿಕೋದ್ಯಮಿ ಲಕ್ಷ್ಮೀ ನರಸಿಂಹಪ್ರಸಾದ್ ಮಾತನಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ ಬಹಳ ವಿಶೇಷ. ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅಖಂಡ ಭಜನೆ, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಮಹತ್ವ ಪಡೆದಿದೆ ನನಗೆ ನಿಮ್ಮೆಲ್ಲರ ಆಶೀರ್ವಾದ ದೊರಕಿದೆ. ನಾವು ಸಕಾರಾತ್ಮಕವಾಗಿ ಯೋಚಿಸಬೇಕು ಎಂದು ಹೇಳಿದರು.
ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಹೊಸಹಳ್ಳಿ ರಾಜಾರಾಮ್, ಬೆಂಗಳೂರು ವಿಧುಷಿ ಜಲಜರಾಜು ಅವರಿಂದ ಗಮಕ ವಾಚನ, ವ್ಯಾಖ್ಯಾನ, ಪ್ರತಿಭಾ ಪುರಸ್ಕಾರ, ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.
4ಕೆಟಿಆರ್.ಕೆ.1ಃ ತರೀಕೆರೆಯಲ್ಲಿ ಬ್ರಾಹ್ಮಣ ಸೇವಾ ಸಮಿತಿಯಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿವಮೊಗ್ಗ ಮಾಜಿ ಶಾಸಕ ಕೆ.ಬಿ..ಪ್ರಸನ್ನಕುಮಾರ್ ಉದ್ಘಾಟಿಸಿದರು. ಬ್ರಾಹ್ಮಣ ಸೇವಾ ಸಮಿತಿ ಅಧ್ಯಕ್ಷ ಆರ್.ಎನ್.ಶ್ರೀಧರ್, ಸ್ಕಂದ ಮಾತಾ ವಿಪ್ರ ಮಹಳಾ ಸಂಘದ ಅಧ್ಯಕ್ಷೆ ಭಾಮಾ ಸುಬ್ರಹ್ಮಣ್ಯ ಮತ್ತಿತರರು ಇದ್ದರು.