ಕನ್ನಡಪ್ರಭ ವಾರ್ತೆ ಮೈಸೂರು
ತರಬೇತಿ ಕೇಂದ್ರದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನಂಜನಗೂಡು ತಾಲೂಕಿನ ಚಿಕ್ಕಯ್ಯನಛತ್ರ ಹೋಬಳಿಯ ರಾಂಪುರ ಗ್ರಾಮದಲ್ಲಿ ಭತ್ತ ಮತ್ತು ಮುಸುಕಿನಜೋಳ ಬೆಳೆಯಲ್ಲಿ ಸಮಗ್ರ ಬೇಸಾಯ ಕ್ರಮಗಳ ಕುರಿತು ಬುಧವಾರ ಆಯೋಜಿಸಿದ್ದ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿ ಕೇಂದ್ರದಲ್ಲಿ ಆಯೋಜಿಸುತ್ತಿರುವ ವಿವಿಧ ಆನ್ ಲೈನ್ ಮತ್ತು ಸಾಂಸ್ಥಿಕ ತರಬೇತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಅದರ ಸದುಪಯೋಗ ಪಡೆಯುವಂತೆ ರೈತರಿಗೆ ಮನವಿ ಮಾಡಿದರು.ತರಬೇತಿಯ ಅಂಗವಾಗಿ ಈ ಭಾಗದ ಪ್ರಮುಖ ಬೆಳೆಗಳಾದ ಭತ್ತ ಹಾಗೂ ಮುಸಕಿನ ಜೋಳ ಬೆಳೆಗಳ ಸಮಗ್ರ ಬೇಸಾಯ ಕ್ರಮಗಳು , ವಿವಿಧ ಕೀಟ, ರೋಗಗಳು ಹಾಗೂ ಅವುಗಳ ನಿರ್ವಹಣ ಕ್ರಮಗಳ ಕುರಿತು ಸಸ್ಯರೋಗ ಶಾಸ್ತ್ರಜ್ಞೆ ಡಾ.ಆರ್.ಎನ್. ಪುಷ್ಪ ಮಾಹಿತಿ ನೀಡಿದರು.
ಮುಸುಕಿನ ಜೋಳ ಬಿತ್ತನೆಗೆ ಮೊದಲು ಪ್ರತಿ 1 ಕೆಜಿ ಬಿತ್ತನೆ ಬೀಜಕ್ಕೆ 3 ಗ್ರಾಂ ಮೆಟಲಾಕ್ಸಿಲ್ 8 ಡಬ್ಲುಪಿ + ಮ್ಯಾಂಕೊಜೆಬ್ 64 ಡಬ್ಲುಪಿ ಸಂಯುಕ್ತ ಶಿಲೀಂದ್ರನಾಶಕದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದರಿಂದ ಶೇಕಡ 30 ರಿಂದ 40 ರಷ್ಟು ರೋಗ ನಿಯಂತ್ರಣವಾಗುತ್ತದೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ಅಭಿವೃದ್ಧಿ ಪಡಿಸಿರುವ ಬೂಜು, ಕೇದಿಗೆ ರೋಗ ನಿರೋಧಕ ತಳಿಗಳಾದ ಎಂಎಎಚ್-14-5, ಎಂಎಎಚ್-1137 (ಹೇಮ), ಎಂಎಎಚ್-2049 (ನಿತ್ಯಶ್ರೀ), ಎಂಎಎಚ್-14-138, ಎಂಎಎಚ್ -15-84 ತಳಿಗಳನ್ನು ಬೆಳೆಯುವುದು ಸೂಕ್ತ ಎಂದರು.
ನಂತರ ಬಸವನಪುರ ಗ್ರಾಮದ ಪ್ರಗತಿಪರ ರೈತ ಮುದ್ದರಾಮಯ್ಯ ಸಮಗ್ರ ಕೃಷಿ ಪದ್ದತಿ ಅಳವಡಿಕೆಯ ಕುರಿತು ಅನುಭವ ಹಂಚಿಕೊಂಡರು.