ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ತಂಬಾಕು ಸೇವನೆಯು ಹಾನಿಕಾರಕ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುವ ಕುರಿತು ಸಾರ್ವಜನಿಕರಿಗೆ ವಿವರಿಸಿ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ (3.0)ಯನ್ನು ಜಿಲ್ಲೆಯಲ್ಲಿ ಡಿಸೆಂಬರ್ 9 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಡಿ ಹಲವು ಕಾರ್ಯಕ್ರಮಗಳನ್ನು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 400 ಶಾಲಾ ಕಾಲೇಜುಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿಸಲು ಯೋಜಿಸಲಾಗಿದೆ. ಅಭಿಯಾನದ ಅವಧಿಯಲ್ಲಿ ಕೋಟ್ಪಾ ದಾಳಿಗಳನ್ನು ಹಮ್ಮಿಕೊಂಡು ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಮೂಲಕ ತಂಬಾಕು ಸೇವನೆಯನ್ನು ನಿಯಂತ್ರಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ನಾಯಿ ಕಡಿದರೆ ವ್ಯಾಕ್ಸಿನ್ ಪಡೆಯಿರಿ ನಾಯಿ ಕಚ್ಚುವಿಕೆಯು ರೇಬೀಸ್ ಸೋಂಕನ್ನು ಹರಡಬಹುದು, ಇದು ಮಾರಣಾಂತಿಕ ಕಾಯಿಲೆಯಾಗಿದ್ದು.ಯಾವುದೇ ವ್ಯಕ್ತಿ ನಾಯಿ ಕಡಿತಕ್ಕೆ ಒಳಗಾದ ತಕ್ಷಣ ವೈದ್ಯಕೀಯ ಸಹಾಯ ಪಡೆಯುವುದು ಅತ್ಯಗತ್ಯ, ವಿಶೇಷವಾಗಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನೇಷನ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲೆಯಲ್ಲಿ 2025 ನೇ ವರ್ಷದಲ್ಲಿ ಈ ವರೆಗೆ 9,478 ಜನರಿಗೆ ನಾಯಿ ಕಚ್ಚಿರುವುದು ದಾಖಲಾಗಿದೆ ಮತ್ತು 739 ಹಾವು ಕಡಿತದ ಪ್ರಕರಣಗಳು ಈ ವರೆಗೆ ದಾಖಲಾಗಿದ್ದು ಅದರ ಪೈಕಿ ಐವರು ನಿಧನರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾಯಿ ಮತ್ತು ಹಾವಿನ ಕಡಿತದಿಂದ ಸಾವು ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.ಹಾವು ಕಡಿತ: ಅರಿವು ಮೂಡಿಸಿ
ಈ ವೇಳೆ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರಪತ್ರ ಹಾಗೂ ಭಿತ್ತಿ ಪತ್ರಗಳನ್ನು ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಮಹೇಶ್ ಕುಮಾರ್, ಆರ್.ಸಿ.ಎಚ್.ಓ ಅಧಿಕಾರಿ ಡಾ. ಜಿ.ವಿ. ಸಂತೋಷ್ ಬಾಬು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ಎನ್. ರಂಗಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್ ಹಾಗೂ ವಿವಿಧ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.