ಬೆಂಗಳೂರು ನಗರದಲ್ಲಿ ಕೆಂಪೇಗೌಡ ಜಯಂತಿಗೆ 15 ಲಕ್ಷ ಸಸಿಗಳ ನೆಡುವ ಅಭಿಯಾನ

KannadaprabhaNewsNetwork |  
Published : Jun 23, 2026, 04:00 AM IST
ಬಿ ಸ್ಮೈಲ್ ಯೋಜನೆಗಳ ಅನುಷ್ಠಾನ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. | Kannada Prabha

ಸಾರಾಂಶ

‘ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026–30” ರ ಅಂಗವಾಗಿ, ನಾಡಪ್ರಭು ಕೆಂಪೇಗೌಡರ ದಿನಾಚರಣೆ ಅಂಗವಾಗಿ ಜೂ.27ರಂದು ನಗರದ ವಿವಿಧ ಭಾಗಗಳಲ್ಲಿ 15 ಲಕ್ಷ ಸ್ಥಳೀಯ ತಳಿ ಸಸಿಗಳನ್ನು ನೆಡುವ ಬೃಹತ್ ಅಭಿಯಾನವನ್ನು ಬಿಡಿಎ ಆಯೋಜಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026–30” ರ ಅಂಗವಾಗಿ, ನಾಡಪ್ರಭು ಕೆಂಪೇಗೌಡರ ದಿನಾಚರಣೆ ಅಂಗವಾಗಿ ಜೂ.27ರಂದು ನಗರದ ವಿವಿಧ ಭಾಗಗಳಲ್ಲಿ 15 ಲಕ್ಷ ಸ್ಥಳೀಯ ತಳಿ ಸಸಿಗಳನ್ನು ನೆಡುವ ಬೃಹತ್ ಅಭಿಯಾನವನ್ನು ಬಿಡಿಎ ಆಯೋಜಿಸಿದೆ.

ಸೋಮವಾರ ಈ ಕುರಿತು ಜಿಬಿಎ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಡಿಎ ಅಧ್ಯಕ್ಷ ಹ್ಯಾರೀಸ್‌ ಅವರು, ಕಾರ್ಯಕ್ರಮಕ್ಕೆ ಅಗತ್ಯವಿರುವ ಸಸಿಗಳು, ಉಪಕರಣಗಳು, ಮಾರ್ಗಸೂಚಿ ಫಲಕಗಳು ಹಾಗೂ ಇತರೆ ಸಾಮಗ್ರಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಸಮರ್ಪಕ ಮೇಲ್ವಿಚಾರಣೆ ಹಾಗೂ ಪರಿಣಾಮಕಾರಿ ಸಮನ್ವಯ ಇರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಅಭಿಯಾನವು ನಗರದ ಹಸಿರು ವಿಸ್ತರಣೆಗೆ ಮಹತ್ವದ ಕೊಡುಗೆ ನೀಡಲಿದ್ದು, ಡಾ. ಶಿವರಾಮ ಕಾರಂತ ಬಡಾವಣೆ, ನಾಡಪ್ರಭು ಕೆಂಪೇಗೌಡ ಬಡಾವಣೆ, ಬನಶಂಕರಿ 6ನೇ ಹಂತ, ಕೆರೆ ದಂಡೆಗಳು, ರಾಜಕಾಲುವೆಗಳ ಇಕ್ಕೆಲಗಳು, ಉದ್ಯಾನವನಗಳು ಹಾಗೂ ವಿವಿಧ ಪರಿಸರ ವಲಯಗಳಲ್ಲಿ ಸಸಿ ನೆಡುವ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಅಧಿಕೃತ ಡಿಜಿಟಲ್ ಪ್ರಮಾಣಪತ್ರ ನೀಡಲಾಗುವುದು. ಜೊತೆಗೆ ‘ಹಸಿರು ಬೆಂಗಳೂರು ರೂವಾರಿಗಳು’ ಎಂಬ ಗೌರವ ಸಿಗಲಿದೆ. ವಿಶ್ವದಾಖಲೆ ಅಭಿಯಾನದ ಭಾಗವಾಗಿರುವ ಹೆಮ್ಮೆಯ ಅನುಭವವೂ ದೊರೆಯಲಿದೆ. ಅತ್ಯುತ್ತಮ ಕೊಡುಗೆ ನೀಡುವವರಿಗೆ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳಿಂದ ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಬಿಡಿಎ ಆಯುಕ್ತರಾದ ಮೇಜರ್ ಮಣಿವಣ್ಣನ್ ಪಿ. ಅವರು, ಒಟ್ಟು 243 ಎಕರೆ ಪ್ರದೇಶವನ್ನು 49 ವಲಯಗಳಾಗಿ ಹಾಗೂ 314 ಸಸಿ ನೆಡುವ ಸ್ಥಳಗಳಾಗಿ ವಿಭಾಗಿಸಲಾಗಿ, ಪ್ರತಿಯೊಂದು ವಲಯಕ್ಕೂ ಒಬ್ಬ ವಲಯ ಕಮಾಂಡರ್ ಉಪಸ್ಥಿತರಿರುವುದಾಗಿ ತಿಳಿಸಿದರು.

ಸಮಗ್ರ ಸೌಲಭ್ಯಗಳ ವ್ಯವಸ್ಥೆ:

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಆಹಾರ, ಪೋರ್ಟಬಲ್ ಶೌಚಾಲಯಗಳು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ. ಆರೋಗ್ಯ ತುರ್ತು ಪರಿಸ್ಥಿತಿಗಳಿಗಾಗಿ ವೈದ್ಯರು ಹಾಗೂ ನರ್ಸ್ ಗಳು ಉಪಸ್ಥಿತರಿದ್ದು, ಸಮರ್ಪಕ ಬೆಳಕು, ವಾಹನ ನಿಲುಗಡೆ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದರು.

ಮ್ಯಾರಥಾನ್‌ಗೆ ಆಹ್ವಾನ:

ನಾಡಪ್ರಭು ಕೆಂಪೇಗೌಡರ ದಿನಾಚರಣೆಯ ಅಂಗವಾಗಿ ಜೂ.27ರಂದು ಬೆಳಗ್ಗೆ 6 ಗಂಟೆಗೆ 10ಕೆ ಹಾಗೂ 5ಕೆ ಮ್ಯಾರಥಾನ್ ಆಯೋಜಿಸಲಾಗಿದೆ. ಇದು ಮೇಜರ್‌ ಆರ್ಟಿರಿಯಲ್‌ ರಸ್ತೆಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದವರೆಗೆ ನಡೆಯಲಿದೆ. ಮ್ಯಾರಾಥಾನ್ ನೋಂದಣಿಗಾಗಿ https://mysamay. in/e/kempegowdarun ಲಿಂಕ್ ಬಳಸಬಹುದು ಹಾಗೂ ಸಸಿ ನೆಡುವ ಕುರಿತ ಮಾಹಿತಿ ಹಾಗೂ ಸಸಿ ನೆಡಲು ನೋಂದಣಿ ಮಾಡಿಕೊಳ್ಳಲು https://greenbengalurubybda.in/ ಸಂಪರ್ಕಿಸಬಹುದು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಸಹಾಯಕ್ಕಾಗಿ ದೂರವಾಣಿ: 94831 66622 ಸಂಪರ್ಕಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್‌ ಇಲಾಖೆ ಖಾಸಗೀಕರಣ ವಿರೋಧಿಸಿ ಲೈಸೆನ್ಸ್‌ ಗುತ್ತಿಗೆದಾರರ ಸಂಘ ಪ್ರತಿಭಟನೆ
ಟನಲ್‌ ಜತೆ 150 ಕಿ.ಮೀ ಎಲಿವೇಟೆಟ್‌ ರಸ್ತೆ