ಜು.12ಕ್ಕೆ ಮಾತೃಗೊಂದು ಮರ ಗಿಡ ನೆಡುವ ಅಭಿಯಾನ: ಡಾ.ಕುಮಾರ

KannadaprabhaNewsNetwork |  
Published : Jul 07, 2026, 01:30 AM IST
6ಕೆಎಂಎನ್‌ಡಿ-6ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾತೃಗೊಂದು ಮರ -ಸಹಸ್ರ ಗಿಡ ನೆಡುವ ಅಭಿಯಾನದ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಡಾ.ಕುಮಾರ ಬಿಡುಗಡೆ ಮಾಡಿದರು. | Kannada Prabha

ಸಾರಾಂಶ

ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾತೃಗೊಂದು ಮರ -ಸಹಸ್ರ ಗಿಡ ನೆಡುವ ಅಭಿಯಾನದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ಡಾ.ಕುಮಾರ.

ಕನ್ನಡಪ್ರಭ ವಾರ್ತೆ ಮಂಡ್ಯ

ನಾಗಮಂಗಲ ತಾಲೂಕಿನ ಪಡುವಲಪಟ್ಟಣ ಗ್ರಾಮದ ಕಾನನ ಬ್ರಹ್ಮದಲ್ಲಿ ಜು.12 ರಂದು ಬೆಳಗ್ಗೆ 9.30 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾತೃಗೊಂದು ಮರ-ಸಹಸ್ರ ಗಿಡನೆಡುವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾತೃಗೊಂದು ಮರ-ಸಹಸ್ರ ಗಿಡ ನೆಡುವ ಅಭಿಯಾನ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡುವರು. ನಾಗಮಂಗಲ ಪ್ರವಾಸಿ ಮಂದಿರದಲ್ಲಿ ನ್ಯಾಯಮೂರ್ತಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಹಾಗೂ ನೈರ್ಮಲ್ಯವನ್ನು ಕಾಪಾಡುವಂತೆ ತಿಳಿಸಿದರು.

ಅದೇ ದಿನ ವೇದಿಕೆಯ ಸ್ವಚ್ಛತೆ ಕಾಪಾಡುವುದು ಹಾಗೂ ಕಾರ್ಯಕ್ರಮ ಕುರಿತು ಬ್ಯಾನರ್ ವ್ಯವಸ್ಥೆಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು.ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಭಾಗವಹಿಸುವ ಸಾರ್ವಜನಿಕರು, ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎ.ಆನಂದ್‌, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್.ನಂದಿನಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ನಾಳೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ನಾಗಮಂಗಲ:ತಾಲೂಕು ಕಚೇರಿ ಆವರಣದಲ್ಲಿ ಜುಲೈ 8 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1:30 ಗಂಟೆವರೆಗೆ ಲೋಕಾಯುಕ್ತ ವಿಭಾಗದ ಅಧಿಕಾರಿಗಳಿಂದ ತಾಲೂಕಿನ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು/ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕಾರ ಮಾಡಲಿದ್ದಾರೆ. ಸುನೀಲ್ ಕುಮಾರ್.ಎಚ್.ಟಿ, ಡಿವೈಎಸ್‌ಪಿ ಹಾಗೂ ಬ್ಯಾಟರಾಯಗೌಡ.ಬಿ.ಪಿ. ರವಿಕುಮಾರ್.ಎಂ. ಲೇಪಾಕ್ಷ ಮೂರ್ತಿ.ಆರ್.ಜಿ ಪೊಲೀಸ್ ಇನ್ಸ್ಪೆಕ್ಟರ್, ಕರ್ನಾಟಕ ಲೋಕಾಯುಕ್ತರು ಸದರಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಭ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು/ಅಹವಾಲುಗಳೇನಾದರೂ ಇದ್ದಲ್ಲಿ ಸ್ವೀಕರಿಸಲಾಗುವುದು ಎಂದು ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

3000ಕ್ಕೂ ಅಧಿಕ ಪಿಂಚಣಿ ಕಾರ್ಡ್ ರದ್ದುಗೊಳಿಸಿ ವಂಚನೆ: ನವೀನ್
ರಾಷ್ಟ್ರದ ಹಿತದೃಷ್ಟಿಯಿಂದ ಎಸ್‌ಐಆರ್ ಅಭೂತಪೂರ್ವ ಕಾರ್ಯಕ್ರಮ