ಕ್ಯಾಂಪ್ಕೋ ಚುನಾವಣೆ: ಎಲ್ಲ 6 ಸ್ಥಾನಗಳಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಅತ್ಯಧಿಕ ಮತ

KannadaprabhaNewsNetwork |  
Published : Nov 26, 2025, 02:45 AM IST
ಅತ್ಯಧಿಕ ಮತ ಪಡೆದ ಸಹಕಾರ ಭಾರತಿಯ ಆರು ಮಂದಿ  | Kannada Prabha

ಸಾರಾಂಶ

ಕ್ಯಾಂಪ್ಕೊ ನಿರ್ದೇಶಕ ಮಂಡಳಿಯ ಆರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಆರು ಮಂದಿ ಅತ್ಯಧಿಕ ಸ್ಥಾನ ಪಡೆದಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ ಇಬ್ಬರು ಅತ್ಯಂತ ಕಡಿಮೆ ಮತ ಪಡೆದಿದ್ದಾರೆ.

ಮಂಗಳೂರು: ಅಂತಾರಾಜ್ಯ ಸಹಕಾರಿ ಸಂಸ್ಥೆಯಾದ ಕೇಂದ್ರ ಅಡಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ) ನಿರ್ದೇಶಕ ಮಂಡಳಿಯ ಆರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಆರು ಮಂದಿ ಅತ್ಯಧಿಕ ಸ್ಥಾನ ಪಡೆದಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ ಇಬ್ಬರು ಅತ್ಯಂತ ಕಡಿಮೆ ಮತ ಪಡೆದಿದ್ದಾರೆ.

ಮಂಗಳವಾರ ಮಂಗಳೂರಿನ ಕ್ಯಾಂಪ್ಕೋ ಪ್ರಧಾನ ಕಚೇರಿಯಲ್ಲಿ ಮತ ಎಣಿಕೆ ನಡೆದಿದೆ. ಅಧಿಕೃತ ಫಲಿತಾಂಶ ನ. 28 ರಂದು ದೆಹಲಿಯ ಸಹಕಾರ ಇಲಾಖೆಯ ಅನುಮೋದನೆ ಬಳಿಕ ಪ್ರಕಟವಾಗಲಿದೆ.

ಆರು ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿದ್ದು, ಸಹಕಾರ ಭಾರತಿಯ ಅಭ್ಯರ್ಥಿಗಳಾದ ದಯಾನಂದ ಹೆಗ್ಡೆ, ಮಹೇಶ್ ಚೌಟ, ಮುರಳೀಕೃಷ್ಣ ಕೆ.ಎನ್, ಪುರುಷೋತ್ತಮ್ ಭಟ್, ಸತೀಶ್ಚಂದ್ರ ಎಸ್.ಆರ್, ತೀರ್ಥರಾಮ ಎ.ವಿ. ಅಧಿಕ ಮತಗಳನ್ನು ಪಡೆದಿದ್ದಾರೆ. ಸ್ವತಂತ್ರರಾಗಿ ಸ್ಪರ್ಧಿಸಿದ ಎಂ.ಜಿ. ಸತ್ಯನಾರಾಯಣ ಮತ್ತು ರಾಮ್ ಪ್ರತೀಕ್ ಅತ್ಯಲ್ಪ ಮತ ಪಡೆದರು. ದಯಾನಂದ ಹೆಗ್ಡೆ 2,163 ಮತ, ಮಹೇಶ್‌ ಚೌಟ 2,216 ಮತ, ಮುರಳೀಕೃಷ್ಣ ಕೆ.ಎನ್‌. 2,261 ಮತ, ಪುರುಷೋತ್ತಮ ಭಟ್‌ ಎಂ. 2,249 ಮತ, ಸತೀಶ್ಚಂದ್ರ ಎಸ್‌.ಆರ್‌. 2,181 ಮತ, ತೀರ್ಥರಾಮ ಎ.ವಿ. 2,052 ಮತ ಪಡೆದು ಮುನ್ನಡೆ ದಾಖಲಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾದ ರಾಮ್‌ ಪ್ರತೀಕ್‌ ಕೆ. 623 ಮತ ಮತ್ತು ಸತ್ಯನಾರಾಯಣ ಎಂ.ಜಿ. 620 ಕಡಿಮೆ ಮತ ಪಡೆದಿದ್ದಾರೆ. ಪ್ರಸ್ತುತ ಕೇರಳದ ಎಲ್ಲ ಒಂಬತ್ತು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಕೇರಳದಿಂದ ಸಹಕಾರ ಭಾರತಿ ಬೆಂಬಲಿತ ಪದ್ಮರಾಜ ಪಟ್ಟಾಜೆ, ವೆಂಕಟರಮಣ ಭಟ್, ಸತ್ಯನಾರಾಯಣ ಪ್ರಸಾದ್, ಸತೀಶ್ಚಂದ್ರ ಭಂಡಾರಿ, ಸೌಮ್ಯ ಪ್ರಕಾಶ್, ರಾಧಾಕೃಷ್ಣ, ವಿವೇಕಾನಂದ ಗೌಡ, ಗಣೇಶ್ ಕುಮಾರ್, ಸದಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕರ್ನಾಟಕ ಒಟ್ಟು 10 ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಮಾಲಿನಿ ಪ್ರಸಾದ್, ಗಣೇಶ್, ರಾಘವೇಂದ್ರ ಎಚ್.ಎಂ, ಉತ್ತರ ಕನ್ನಡದ ವಿಶ್ವನಾಥ ಹೆಗಡೆ ಅವಿರೋಧವಾಗಿ ಆಯ್ಕೆಯಾದವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಪ್ಯಾರಾದಲ್ಲಿ ಕೇಂದ್ರ ವಿರುದ್ಧ ಟೀಕಾ ಪ್ರಹಾರ
ಬೇಡಿಕೆಗೆ ತಕ್ಕಷ್ಟು ಬರುತ್ತಿಲ್ಲ ಮೈಸೂರು ರೇಷ್ಮೆ ಸೀರೆ