ಸಮುದಾಯದ ಐಕ್ಯತೆ, ಸಮೃದ್ಧಿ ಅಧ್ಯಯನಕ್ಕೆ ಶಿಬಿರಗಳು ಅವಶ್ಯ-ಪ್ರೊ. ಬಾಗಲಕೋಟೆ

KannadaprabhaNewsNetwork |  
Published : Dec 03, 2025, 02:45 AM IST
28ಎಚ್‌ವಿಆರ್5- | Kannada Prabha

ಸಾರಾಂಶ

ಜಿಲ್ಲೆಯು ಐತಿಹಾಸಿಕ ಕ್ಷೇತ್ರವಾಗಿದ್ದು, ಧಾರ್ಮಿಕ ಸಂಪ್ರದಾಯಗಳು, ಜನಜೀವನ, ಭಾಷೆ, ಸಾಹಿತ್ಯ, ಶಿಕ್ಷಣ, ಕಲೆಗಳ ಆಗರವಾಗಿದೆ. ಸಮುದಾಯದ ಐಕ್ಯತೆಯನ್ನು ಅದರ ಸಮೃದ್ಧಿಯನ್ನು ಇಂತಹ ಶಿಬಿರಗಳಿಂದ ಅಧ್ಯಯನ ಮಾಡಲು ಸಾಧ್ಯ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್.ಟಿ. ಬಾಗಲಕೋಟೆ ಹೇಳಿದರು.

ಹಾವೇರಿ: ಜಿಲ್ಲೆಯು ಐತಿಹಾಸಿಕ ಕ್ಷೇತ್ರವಾಗಿದ್ದು, ಧಾರ್ಮಿಕ ಸಂಪ್ರದಾಯಗಳು, ಜನಜೀವನ, ಭಾಷೆ, ಸಾಹಿತ್ಯ, ಶಿಕ್ಷಣ, ಕಲೆಗಳ ಆಗರವಾಗಿದೆ. ಸಮುದಾಯದ ಐಕ್ಯತೆಯನ್ನು ಅದರ ಸಮೃದ್ಧಿಯನ್ನು ಇಂತಹ ಶಿಬಿರಗಳಿಂದ ಅಧ್ಯಯನ ಮಾಡಲು ಸಾಧ್ಯ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್.ಟಿ. ಬಾಗಲಕೋಟೆ ಹೇಳಿದರು.ಸ್ಥಳೀಯ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಕನ್ನಡ ವಿಭಾಗ ಹಾಗೂ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ 532ನೇ ವ್ಯಾಸಂಗ ವಿಸ್ತರಣಾ ಉಪನ್ಯಾಸ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅಥಿತಿಗಳಾಗಿ ಪಾಲ್ಗೊಂಡಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಸತೀಶ ಕುಲಕರ್ಣಿ ಮಾತನಾಡಿ, ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡಾಗ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ಸುದೀರ್ಘವಾಗಿ ಹರಿದು ಜಿಲ್ಲಾಧ್ಯಯನದ ಅರಿವನ್ನು ಮೂಡಿಸಲು ಸಾಧ್ಯವಾಗುತ್ತದೆ ಎಂದರು.ಇದೇ ಸಂದರ್ಭದಲ್ಲಿ ಕ.ವಿ.ವಿ. ಧಾರವಾಡದ ಸಂಪನ್ಮೂಲ ವ್ಯಕ್ತಿಗಳಾದ ಲಿಂಗರಾಜ ಕಮ್ಮಾರ ಮಾತನಾಡಿ, ಹಾವೇರಿ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ ಭಾರತ ಸ್ವಾತಂತ್ರ್ಯ ಸಂದರ್ಭದಲ್ಲಿ ಅವರ ಕೂಡುಗೆ ಅಪಾರವಾಗಿದೆ ಅವರನ್ನು ನೆನಪಿಸಿಕೊಡುವುದು ಯುವಪಿಳಿಗೆಗೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಾವೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣಾರ್ಥ ಸ್ವಾತಂತ್ರ್ಯ ಭವನವನ್ನು ನಿರ್ಮಿಸುವುದು ನಮ್ಮೆಲ್ಲರ ಬಯಕೆಯಾಗಿದೆ ಎಂದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಡಾ. ಶಿವಾನಂದ ಲಕ್ಕಣ್ಣವರ ಅವರು, ಹಾವೇರಿ ಜಿಲ್ಲೆಯ ವಾಣಿಜ್ಯ ವ್ಯವಹಾರಗಳು ಎಂಬ ವಿಷಯದಲ್ಲಿ ಹಾವೇರಿಯ ವ್ಯಾಪಾರ ವ್ಯವಹಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಬ್ಯಾಡಗಿ ಮೆಣಸಿನಕಾಯಿ, ಹಾವೇರಿಯ ಏಲಕ್ಕಿ ಮಾಲೆ ವಿಶ್ವ ಮಾರುಕಟ್ಟೆಯಲ್ಲಿ ಹೆಸರುವಾಸಿಯಾಗಿದೆ. ಹಾವೇರಿ ವಾಣಿಜ್ಯ ಇನ್ನಿತರ ವ್ಯವಹಾರಗಳನ್ನು ಅಂಕಿಅಂಶಗಳ ಸಮೇತ ತಮ್ಮ ಉಪನ್ಯಾಸದಲ್ಲಿ ತಿಳಿಸಿಕೊಟ್ಟರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಡಾ. ಚಂದ್ರಪ್ಪ ಸೊಗಟಿ ಇವರು ಹಾವೇರಿ ಜಿಲ್ಲೆಯ ಜನಪದ ಕಥೆಗಳನ್ನು ಮನಮೋಹಕವಾಗಿ ತಮ್ಮ ಕ್ಷೇತ್ರಕಾರ್ಯದ ಸಂದರ್ಭದಲ್ಲಿ ಆದಂತಹ ಅನುಭವವನ್ನು ಮಾತಿನ ಲಯದ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಂ.ಎಂ. ಹೊಳ್ಳಿಯವರು ಅಧ್ಯಕ್ಷೀಯ ನುಡಿಯಲ್ಲಿ ಜಿಲ್ಲಾ ಅಧ್ಯಯನದಿಂದ ಯಶಸ್ವಿ ಮಾದರಿಗಳನ್ನು ಇತರ ಜಿಲ್ಲೆಗಳೊಂದಿಗೆ ಹಂಚಿಕೊಳ್ಳಲು, ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಇಂತಹ ವ್ಯಾಸಂಗ ವಿಸ್ತರಣಾ ಉಪನ್ಯಾಸ ಶಿಬಿರಗಳು ಅತೀ ಅವಶ್ಯಕವಾಗಿವೆ ಎಂದರು.ಕನ್ನಡ ವಿಭಾಗದ ಮುಖ್ಯಸ್ಥರು, ಡಾ. ಸಂಜೀವ ಆರ್. ನಾಯಕ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಧಾರವಾಡ ಕವಿವಿ ಪ್ರಸಾರಂಗ ವಿಭಾಗದ ಸಹಾಯಕ ನಿರ್ದೇಶಕ ಡಾ. ಸಿದ್ಧಪ್ಪ ಎನ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪ್ರೊ. ರೂಪ ಕೋರೆ, ಐಕ್ಯೂಎಸಿ, ಸಂಯೋಜಕರು ಉಪಸ್ಥಿತರಿದ್ದರು. ಪ್ರೊ. ಶ್ರೀದೇವಿ ದೊಡ್ಡಮನಿ ನಿರೂಪಿಸಿದರು. ಪ್ರೊ. ಶಂಭನಗೌಡ ನೀರಲಗಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮರಳು ಮಾಫಿಯಾದಿಂದ ಶಾಸಕಿ ಕರೆಮ್ಮಗೆ ಬೆದರಿಕೆ
ಉಡುಪಿಯ ಕೃಷ್ಣಮಠದಲ್ಲಿ ಇನ್ನು ಭಕ್ತರಿಗೆ ಕಟ್ಟುನಿಟ್ಟಿನ ನಿಯಮ ಜಾರಿ