ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ರದ್ದುಗೊಳಿಸಿ: ಹೋರಾಟ ಸಮಿತಿ

KannadaprabhaNewsNetwork |  
Published : Oct 20, 2026, 01:45 AM IST
ಎಸ್.ಐ.ಆರ್ ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ಹಾನಗಲ್ಲ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ  | Kannada Prabha

ಸಾರಾಂಶ

ಎಸ್‌ಐಆರ್ ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸೋಮವಾರ ಹಾನಗಲ್ಲ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಹಾನಗಲ್ಲ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ರದ್ದುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರ ಹಾನಗಲ್ಲ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಎಸ್.ಐ.ಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕೈಬಿಡುವ ಆತಂಕ ಎದುರಾಗಿದೆ. ಇದರಿಂದ ಅನೇಕ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಿ, ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಪರಿಷ್ಕರಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಕೈಬಿಡುವ ಕುರಿತು ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಕರ್ನಾಟಕದಲ್ಲಿ ಸುಮಾರು ೧.೦೭ ಕೋಟಿ ಮತದಾರರ ಹೆಸರುಗಳು ನಾಪತ್ತೆಯಾಗಿವೆ. ಹಾವೇರಿ ಜಿಲ್ಲೆಯಲ್ಲಿ ೧೩.೩೫ ಲಕ್ಷ ಮತದಾರರ ಪೈಕಿ ಆರಂಭಿಕ ಹಂತದಲ್ಲಿ ಸುಮಾರು ೧.೧೪ ಲಕ್ಷ ಮತದಾರರನ್ನು ಅನರ್ಹರ ಪಟ್ಟಿಗೆ ಸೇರಿಸಲಾಗಿದೆ ಎಂಬ ಅಂಕಿಅಂಶಗಳನ್ನು ಉಲ್ಲೇಖಿಸಿರುವ ಸಮಿತಿ, ಈ ಕುರಿತು ಸಮಗ್ರ ಪರಿಶೀಲನೆ ನಡೆಸುವಂತೆ ಒತ್ತಾಯಿಸಿದೆ.

ಎಸ್.ಐ.ಆರ್ ಪ್ರಕ್ರಿಯೆಯ ನಿರ್ವಹಣೆ ಕುರಿತು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಸಮಿತಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯ ವೈಖರಿಯ ಬಗ್ಗೆ ಪರಿಶೀಲನೆ ನಡೆಸಿ, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ರಾಷ್ಟ್ರಪತಿಗಳನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಹಾನಗಲ್ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕರಾದ ವಿಜಯಕುಮಾರ ದೊಡ್ಡಮನಿ, ಅಣ್ಣಪ್ಪ ಚಿಕ್ಕಣ್ಣನವರ, ಮಂಜುನಾಥ ಕರ್ಜಗಿ, ಖಂಡೋಜಿ ಭೋಸಲೆ, ನಾಗರಾಜ ಗಾಜಿಪುರ, ಇರ್ಫಾನ್ ಅಹ್ಮದ್ ಮಿಠಾಯಿಗಾರ, ಫಕ್ಕಿರೇಶ್ ಗೌಡಳ್ಳಿ, ಸಿಕಂದರ್ ವಾಲಿಕರ್, ಪರಶುರಾಮ ಖಂಡೂನವರ, ಮುಕ್ತಾನಂದ ಹಿರೇಮನಿ ಹಾಗೂ ಕಾರ್ಯದರ್ಶಿ ಜಿಲಾನಿಖಾನ್ ಮುಲ್ಲಾ ಇತರರಿದ್ದರು. ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಂತಿಯುತ ಮತದಾನ ನಡೆಸಲು ಕ್ರಮ ವಹಿಸಿ: ಡಿಸಿ ಶ್ರೀಧರ್
ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಹುನ್ನಾರ: ಶಾಸಕ ಬಸನಗೌಡ ಪಾಟೀಲ ಯತ್ನಾಳ್