ಸಿದ್ದಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅತಿಕ್ರಮಣ ಹಾಗೂ ಸರ್ಕಾರಿ ಜಾಗದಲ್ಲಿರುವ ಮನೆ ನಂಬರ್‌ಗಳನ್ನು ರದ್ದುಗೊಳಿಸಿ ತೆರಿಗೆ ಆಕರಣೆ ಮಾಡದಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆ ಮುಂದಾಗಿದೆ ಎಂಬ ವಿಷಯ ಗಮನಕ್ಕೆ ಬಂದಿದ್ದು, ತಕ್ಷಣ ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಿರ್ಧಾರ ಕೈಬಿಡುವಂತೆ ಒತ್ತಾಯಿಸಲಾಗುವುದು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಸರ್ವರ್, ನೆಟವರ್ಕ್ ಮತ್ತಿತರ ಕಾರಣಗಳಿಂದ ತಾಲೂಕಿನ ಕೆಲ ಪಂಚಾಯಿತಿಗಳಲ್ಲಿ ಭಾರತ್ ಜೋಡೋ ಸಂಘದ ನೋಂದಣಿ ಕಡಿಮೆಯಾಗಿದ್ದರಿಂದ ಲಿಖಿತವಾಗಿ ಅರ್ಜಿ ತುಂಬಿ ನೋಂದಣಿಗೆ ಅವಕಾಶ ನೀಡಲಾಗಿದ್ದು, ತಕ್ಷಣ ಯುವಜನತೆ ಸಂಘ ನೋಂದಣಿ ಮಾಡಿಕೊಳ್ಳಬೇಕು ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ ಮಾತನಾಡಿ, ಭಾರತ್ ಜೋಡೋ ಯುವ ಸಂಘದ ನೋಂದಣಿಗೆ ಎಲ್ಲರೂ ಸಹಕಾರ ನೀಡಿ. ಸಂಘದ ನೋಂದಣಿ ಕ್ಷಿಪ್ರಗತಿಯಲ್ಲಿ ನಡೆಸಬೇಕಿದೆ. ಜತೆಗೆ ಗ್ರಾಮ ಪಂಚಾಯಿತಿ ಮಟ್ಟದ ಪಂಚ ಗ್ಯಾರಂಟಿ ಸಮಿತಿಯನ್ನು ಸಾಮಾಜಿಕ ನ್ಯಾಯದಡಿಯಲ್ಲಿ ರಚಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ವೀರಭದ್ರ ನಾಯ್ಕ, ಎಸ್.ಆರ್. ರವಿಕುಮಾರ, ಜಿಪಂ ಮಾಜಿ ಸದಸ್ಯ ವಿ.ಎನ್. ನಾಯ್ಕ ಉಪಸ್ಥಿತರಿದ್ದರು.