ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ: ಬಯ್ಯಾಪುರ

KannadaprabhaNewsNetwork | Published : May 20, 2024 1:34 AM

ಸಾರಾಂಶ

ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ.

ಕನ್ನಡಪ್ರಭ ವಾರ್ತೆ ಕೊಪ್ಪಳ

ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಈಗಾಗಲೇ ಪ್ರಚಾರವನ್ನು ಭರದಿಂದ ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೀಗಾಗಿ, ಗೆಲುವು ಸುಲಭವಾಗಲಿದೆ ಎನ್ನುವ ವಿಶ್ವಾಸ ನಮ್ಮ ನಾಯಕರಲ್ಲಿ ಬಂದಿದೆ ಎಂದರು.

ಕ್ಷೇತ್ರದಾದ್ಯಂತ ಪದವೀಧರರ ಸಂಪರ್ಕ ಮಾಡಿ, ಮನವೊಲಿಸಲಾಗತ್ತದೆ. ಕಾಂಗ್ರೆಸ್ ತತ್ವ, ಸಿದ್ಧಾಂತ ಮತ್ತು ಇತ್ತೀಚಿಗೆ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಪದವೀಧರರಿಗೆ ಕೊಡುತ್ತಿರುವ ಯುವ ನಿಧಿ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಹಂತದಲ್ಲಿ ಎಲ್ಲ ನಾಯಕರು ಪದವೀಧರ ಮತದಾರರಿಂದ ಮತಯಾಚನೆ ಮಾಡುತ್ತಿದ್ದೇವೆ. ಈಶಾನ್ಯ ಪದವೀಧರ ಕ್ಷೇತ್ರವು ದೊಡ್ಡ ಕ್ಷೇತ್ರವಾಗಿದ್ದು, ಎಲ್ಲೆಡೆ ಪದವೀಧರ ಸಂಪರ್ಕ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಇದು ಕಷ್ಟವಾಗುವುದರಿಂದ ವಿವಿಧ ಕ್ಷೇತ್ರಗಳಿಗೆ ಅವರು ಭೇಟಿ ಮಾಡಿದ್ದು, ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದೇವೆ ಎಂದರು.

ಸಚಿವ ಶಿವರಾಜ ತಂಗಡಗಿ, ಸಂಸದ ಸಂಗಣ್ಣ ಕರಡಿ, ಶಾಸಕ ರಾಘವೇಂದ್ರ ಹಿಟ್ನಾಳ, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ರಾಜಶೇಖರ ಹಿಟ್ನಾಳ, ಶರಣಪ್ಪ ಮಟ್ಟೂರು ಇದ್ದರು.

ಗೆಲವು ನಮ್ಮದೇ-ಚಂದ್ರಶೇಖರ ಪಾಟೀಲ್ ವಿಶ್ವಾಸ:

ಕ್ಷೇತ್ರಾದ್ಯಂತ ಸುತ್ತಾಡಿದಾಗ ಪದವೀಧರರು ಕಾಂಗ್ರೆಸ್ ಕುರಿತು ಉತ್ತಮ ಭಾವನೆ ಹೊಂದಿದ್ದಾರೆ. ಹೀಗಾಗಿ, ಗೆಲುವು ನಮ್ಮ ಪರವಾಗಿದೆ ಎಂದು ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಕುಟುಂಬದಿಂದ ಬಂದಿದ್ದು, ನನಗೆ ರಾಜಕೀಯದ ಬಗ್ಗೆ ಅರಿವು ಇದೆ. ವಿವಿಧ ಶಿಕ್ಷಣ ಸಂಸ್ಥೆಗಳಿವೆ. ಅಲ್ಲಿನ ಶಿಕ್ಷಕರ, ಪದವೀಧರರ ಹಲವು ಸಮಸ್ಯೆಗಳನ್ನು ನಾನು ವಾಸ್ತವದಲ್ಲಿ ನೋಡುತ್ತಿದ್ದೇನೆ. ಕಲ್ಯಾಣ ಭಾಗದಲ್ಲಿನ ಹಲವು ಸಮಸ್ಯೆಗಳ ಕುರಿತು ನಾನು ವಿಧಾನಪರಿಷತ್‌ನಲ್ಲಿ ಗಮನ ಸೆಳೆದಿದ್ದೇನೆ. ಆರೂ ಕ್ಷೇತ್ರದಲ್ಲಿ ನಾನು ಸೇರಿದಂತೆ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವುದು ಪಕ್ಕಾ ಎಂದರು.

Share this article